ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಾಮಫಲಕವನ್ನು ಕೊಡುಗೆಯಾಗಿ ನೀಡಲಾಯಿತು.
ಆರೋಗ್ಯ ಕೇಂದ್ರದ ಸಮೀಪ ಅಳವಡಿಸಲಾಗಿರುವ ನಾಮಫಲಕವನ್ನು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಅವರು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ ಸಮ್ಮುಖದಲ್ಲಿ ಬುಧವಾರ ಅನಾವರಣಗೊಳಿಸಿ ಕೊಡುಗೆಯನ್ನು ಹಸ್ತಾಂತರಿಸಿದರು.
ನಾಮಫಲಕವನ್ನು ಕೊಡುಗೆಯಾಗಿ ನೀಡಿದ ಲಿಫ್ಟನ್ ಒಲಿವೇರಾ ಅವರನ್ನು ಗೌರವಿಸಲಾಯಿತು. ರೋಟರಿ ವಲಯ ಸೇನಾನಿ ಕೆ.ರಾಮನಾಥ ನಾಯಕ್, ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಪಂ ಸದಸ್ಯ ಬಿ.ರಾಘವೇಂದ್ರ ಪೈ, ರೋಟರಿ ಸದಸ್ಯರಾದ ಲಿಫ್ಟನ್ ಒಲಿವೇರಾ, ಗಿರೀಶ ಖಾರ್ವಿ, ಆಸ್ಪತ್ರೆಯ ಶುಶ್ರೂಷಕಿ ಶೋಭಾ, ಆಸ್ಪತ್ರೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.