ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಗುಜ್ಜಾಡಿಯ ಪತ್ರಿಕಾ ವಿತರಕ ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು.
ರೋಟರಿ ಹಿರಿಯ ಸದಸ್ಯರಾದ ಜನಾದನ ಪೂಜಾರಿ, ವಾಸುದೇವ ಶೇರುಗಾರ್ ಮತ್ತು ರೋಟರಿ ಸದಸ್ಯರು ಚಂದ್ರಶೇಖರ್ ಅವರನ್ನು ಸನ್ಮಾನಿಸಿದರು. ರೋಟರಿ ಸದಸ್ಯ ವಿಜಯ್ ಪೂಜಾರಿ ಉಪಸ್ಥಿತರಿದ್ದರು.
ಗಂಗೊಳ್ಳಿ ರೋಟರಿ ಕ್ಲಬ್ ನ ಅಧ್ಯಕ್ಷ ರಾಜೇಶ್ ಎಂ. ಜಿ. ಸ್ವಾಗತಿಸಿದರು. ವಲಯ ಸೇನಾನಿ ಕೆ. ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತನಾಡಿದರು.