ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಭರತ ಭೂಮಿಯಲ್ಲಿ ಗುರುವಿಗೆ ವಿಷೇಶವಾದ ಮಾನ್ಯತೆಯಿದೆ. ಭವಿಷ್ಯವನ್ನು ರೂಪಿಸುವ ಸಾಮರ್ಥ್ಯ ಹಾಗೂ ಕಲ್ಲನ್ನು ಕೂಡ ತಿದ್ದಬಹುದಾದ ಯೋಗ್ಯತೆ ಗುರುಗಳದ್ದಾಗಿದೆ. ಗುರುಕುಲ ಪದ್ದತಿ ಮೂಲಕ ಗುರು ಪರಪಂರೆ ಬೆಳೆದು ಬಂಧ ಸಂಸ್ಕಾರ ಈ ನೆಲದಲ್ಲಿದೆ. ಹೀಗಾಗಿ ಗುರು ಭಕ್ತಿ ಮೂಲಕ ಬದುಕು ಪಾವನಗೊಳ್ಳಬೇಕಾದ ಪದ್ದತಿ ನಮ್ಮದು ಎಂದು ಯು. ಬಿ. ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯು. ಬಿ. ಶೆಟ್ಟಿ ಹೇಳಿದರು.
ಅವರು ಸೋಮವಾರ ಯು. ಬಿ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಪ್ರವರ್ತಿತ ಯು. ಬಿ ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಬೈಂದೂರು ಹಾಗೂ ಉಪ್ಪುಂದ ಇದರ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯ ಕಾರ್ಯದರ್ಶಿ ಯಶಶ್ರೀ ಶೆಟ್ಟಿ ಮಾತನಾಡಿ ರಾಧಾಕೃಷ್ಣನ್ರವರ ಆದರ್ಶ ಜಗತ್ತಿಗೆ ಶ್ರೇಯಸ್ಸು ನೀಡಿದೆ. ಸಂಸ್ಕಾರಯುತ ಜೀವನ ರೂಪಿಸಬೇಕಾದರೆ ಒಬ್ಬ ಯೋಗ್ಯ ಹಾಗೂ ಯಶಸ್ವಿ ಗುರು ಮುಖ್ಯ. ಸುಸಂಸ್ಕೃತ ಸಮಾಜದ ನಿರ್ಮಾಣದಲ್ಲಿ ಗುರುಗಳ ಪಾತ್ರ ಬಹುಮುಖ್ಯವಾಗಿದೆ. ಎಂದರು.
ಈ ಸಂದರ್ಭ ಶಿಕ್ಷಕರನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕ ಸುಬ್ರಹ್ಮಣ್ಯ ಜೋಶಿ, ಬೈಂದೂರು ಯು.ಬಿ ಶೆಟ್ಡಿ ಶಾಲಾ ಮುಖ್ಯ ಶಿಕ್ಷಕಿ ಅಮೀತಾ ಶೆಟ್ಡಿ, ಉಪ್ಪುಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಸಂದೇಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕಿ ರಂಜಿತಾ ಹೆಗ್ಡೆ ಸ್ವಾಗತಿಸಿದರು. ಶಿಕ್ಷಕಿ ವೀಣಾ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಆಶಾ ವಂದಿಸಿದರು.