ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಆಹಾರ ಕಿಟ್ ಹಾಗೂ ಪ್ರಮಾಣ ಪತ್ರ ವಿತರಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಜಿಲ್ಲಾ ವಿಕಲಚೇತನರ ಇಲಾಖೆ ಹಾಗೂ ಎಪಿಡಿ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಹಾಗೂ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಸಭಾಂಗಣದಲ್ಲಿ ಆಯೋಜಿಸಿದ್ದ ಒಂದು ತಿಂಗಳ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

Call us

Click Here

ಎಪಿಡಿ ಸಂಸ್ಥೆಯ ಜಿಲ್ಲಾ ನೋಡಲ್ ಅಧಿಕಾರಿಗಳಾದ ಹರೀಶ ಶೆಟ್ಟಿಯವರ ಮಾತನಾಡಿ, ವಿಶೇಷ ಚೇತನರಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ, ನಮ್ಮ ಸಂಸ್ಥೆಯೂ 1959 ರಲ್ಲಿ ಸ್ಥಾಪನೆಯಾಗಿ, ಸುಮಾರು 62 ವರ್ಷಗಳಿಂದ ಅತ್ಯಂತ ಹಿಂದುಳಿದ ಗ್ರಾಮೀಣ ಮಟ್ಟದಲ್ಲಿ ಯುವ ವಿಶೇಷ ಚೇತನರನ್ನ ಗುರುತಿಸಿ ಅವರ ಸ್ವಾವಲಂಬಿ ಜೀವನಕ್ಕೆ ಎಪಿಡಿ ಸಂಸ್ಥೆ ಸಹಕಾರಿಯಾಗಿದೆ ಎಂದು ಪ್ರೋತ್ಸಾಹಿಸಿದರು ಹಾಗೇ ಕೋರನಾ ಸಂದರ್ಭದಲ್ಲಿ ವಿಶೇಷ ಚೇತನರಾಗಿ ಗ್ರಾಮೀಣ ಮಟ್ಟದಲ್ಲಿ ಲಸಿಕೆ, ವೈದ್ಯಕೀಯ ಸೌಲಭ್ಯ, ಸಾಂತ್ವನ ಧೈರ್ಯ ತುಂಬಿದ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಇಂಡಸ್‍ ಬ್ಯಾಂಕ್‍ ಹಾಗೂ ಎಪಿಡಿ ಸಂಸ್ಥೆ ಬೆಂಗಳೂರು ಸಹಯೋಗದಲ್ಲಿ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಿನ ಪಶು ವೈದ್ಯಾಧಿಕಾರಿಗಳಾದ ಶ್ರೀ ಸೂರ್ಯನಾರಾಯಣ ಉಪಾಧ್ಯಾಯ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಎಂಡೋಸಲ್ಫಾನ್ ಪೀಡಿತರ ಪರವಾಗಿ ತಿಲೋತ್ತಮಾ ನಾಯ್ಕ್, ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಮಂಜುನಾಥ ಹೆಬ್ಬಾರ್,ಎಪಿಡಿ ಸಂಸ್ಥೆಯ ಪ್ರತಿನಿಧಿ ಆಕಾಶ್ ಶೆಟ್ಟಿ, ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿ.ಆರ್.ಡಬ್ಲೂ ರಾಜು ಜಡ್ಕಲ್ ನಿರೂಪಿಸಿದರು, ಎಮ್.ಆರ್.ಡಬ್ಲೂ ಮಂಜುನಾಥ ಹೆಬ್ಬಾರ ಸ್ವಾಗತಿಸಿ, ಹರೀಶ ಶೆಟ್ಟಿ ವಂದಿಸಿದರು.

Leave a Reply