Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆಯಲ್ಲಿ ವಾರಾತ್ಯದ ಕರ್ಪ್ಯೂ ರದ್ದು: ಜಿಲ್ಲಾಧಿಕಾರಿ ಕೂರ್ಮಾ ರಾವ್
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆಯಲ್ಲಿ ವಾರಾತ್ಯದ ಕರ್ಪ್ಯೂ ರದ್ದು: ಜಿಲ್ಲಾಧಿಕಾರಿ ಕೂರ್ಮಾ ರಾವ್

    Updated:10/09/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ವಿಧಿಸಲಾಗಿದ್ದ ವಾರಾಂತ್ಯ ಕರ್ಪ್ಯೂವನ್ನು ರದ್ದುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

    Click Here

    Call us

    Click Here

    ರಾತ್ರಿ 9 ರಿಂದ ಬೆಳಿಗ್ಗೆ 5ರ ತನಕ ಎಂದಿನಂತೆ ನೈಟ್ ಕರ್ಪ್ಯೂ ಇರಲಿದೆ. ಹಿಂದಿನ ಆದೇಶದಲ್ಲಿರುವ ನಿರ್ಬಂಧಿತ ಚಟುವಟಿಕೆಗಳು ಹಾಗೆಯೇ ಮುಂದುವರಿಯಲಿದ್ದು, ಕೇರಳ ಹಾಗೂ ಕರ್ನಾಟಕ ಪ್ರಯಾಣಿಸುವ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಅಕ್ಟೋಬರ್ ತನಕ ಮುಂದೂಡುವಂತೆ ತಿಳಿಸಿದ್ದಾರೆ.

    https://youtu.be/659b5Rr-bgk

    ಹೊಸ ಮಾರ್ಗಸೂಚಿಯಲ್ಲಿ ಏನಿದೆ ?
    ಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ ಸಂಬಂಧಪಟ್ಟ ಇಲಾಖೆಯವರು ಹೊರಡಿಸುವ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಸ್ಪರ್ಧಾತ್ಮಕ ತರಬೇತಿಗಳಿಗೆ ಮಾತ್ರ ಈಜು ಕೊಳಗಳನ್ನು ತೆರೆಯಲು ಅನುಮತಿಸಿದೆ.

    ಕೋವಿಡ್-19 ಸೂಕ್ತ ಶಿಷ್ಟಾಚಾರವನ್ನು ಅನುಸರಿಸುವ ಷರತ್ತುಗಳೊಂದಿಗೆ ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸಂಕೀರ್ಣಗಳನ್ನು/ ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ.

    ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಇತರೆ ಸಭೆಗಳು ಹಾಗೂ ಸಮಾರಂಭಗಳು ಮತ್ತು ಸಾರ್ವಜನಿಕರು ಒಟ್ಟುಗೂಡುವುದನ್ನು ನಿರ್ಬಂಧಿಸಲಾಗಿದೆ.

    Click here

    Click here

    Click here

    Call us

    Call us

    ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಮದುವೆ/ ಕೌಟುಂಬಿಕ ಶುಭ ಸಮಾರಂಭಗಳಿಗೆ ಸರ್ಕಾರದ ಹಿಂದಿನ ಮಾರ್ಗಸೂಚಿಯಂತೆ ಈ ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು ಸಭಾಂಗಣದ ಸಾಮರ್ಥ್ಯದ ಶೇ 50 ರಷ್ಠು ಮತ್ತು ಗರಿಷ್ಠ 400 ಜನರಿಗೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.

    ಮದುವೆ/ ಕೌಟುಂಬಿಕ ಶುಭ ಸಮಾರಂಭಗಳನ್ನು ಆಯೋಜಿಸುವವರು ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು. ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ರಮಕ್ಕೆ 400 ಪಾಸ್‌ಗಳನ್ನು ನೀಡಬೇಕು. ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ. ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಅವರ ಪಾಸ್‌ಗಳನ್ನು ಅಧಿಕೃತ ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು.

    ಅಂತ್ಯ ಸಂಸ್ಕಾರಕ್ಕೆ 20 ಜನಕ್ಕೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.

    ಪೂಜಾ ಸ್ಥಳಗಳಾದ ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿಸಲಾಗಿದೆ. ಕೋವಿಡ್‌ ಸಮುಚಿತ ವರ್ತನೆಗಳನ್ನು ಪಾಲಿಸುವುದರೊಂದಿಗೆ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾದ SOP ಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಗೊಳಪಟ್ಟು ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲು ಅನುಮತಿಸಿದೆ. ಆದರೆ, ಸದರಿ ಧಾರ್ಮಿಕ ಸ್ಥಳಗಳಲ್ಲಿ ಜಾತ್ರೆಗಳು, ದೇವಾಲಯ ಉತ್ಸವಗಳು/ಹಬ್ಬಗಳು ,ಮೆರವಣಿಗೆಗಳು ಮತ್ತು ಒಟ್ಟುಗೂಡುವುದನ್ನು ನಿರ್ಬಂಧಿಸಲಾಗಿದೆ.

    ಕೋವಿಡ್-19 ಮಾರ್ಗ ಸೂಚಿಯಂತೆ ಶೇ. 100 ರಷ್ಟು ಆಸನ ಸಾಮರ್ಥ್ಯದವರೆಗೆ ಸಾರ್ವಜನಿಕ ಸಾರಿಗೆಗಳಿಗೆ ಅನುಮತಿಸಲಾಗಿದೆ.

    ಪಬ್‌ ಗಳಿಗೆ ಅನುಮತಿ ಇರುವುದಿಲ್ಲ. ಎಲ್ಲಾ ಅಂಗಡಿಗಳು, ರೆಸ್ಟೋರೆಂಟ್ ಗಳು, ಮಾಲ್ ಗಳು, ಖಾಸಗಿ ಕಚೇರಿಗಳು ಮತ್ತು ಮುಚ್ಚಿದ ಸ್ಥಳಗಳಲ್ಲಿ, ಕೋವಿಡ್-19 ಸೂಕ್ತ ನಡವಳಿಕೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರನ್ವಯ ಕ್ರಮ ಕೈಕೊಳ್ಳಲಾಗುವುದು.

    ಸಿನೆಮಾ ಹಾಲ್‌ಗಳು / ಮಲ್ಟಿಪ್ಲೆಕ್ಸ್‌ಗಳು / ಚಿತ್ರಮಂದಿರಗಳು / ರಂಗಮಂದಿರಗಳು / ಸಭಾಂಗಣಗಳಲ್ಲಿ ಶೇ. 50 ರಷ್ಟು ಆಸನ ಸಾಮರ್ಥ್ಯದೊಂದಿಗೆ COVID ಸೂಕ್ತ ಮಾರ್ಗಸೂಚಿ ಮತ್ತು ಸಂಬಂಧಪಟ್ಟ ಇಲಾಖೆಗಳು ನೀಡುವ SOP ಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಕಾರ್ಯನಿರ್ವಹಿಸಲು ಅನುಮತಿಯನ್ನು ನೀಡಲಾಗಿದೆ.

    ಕೋವಿಡ್‌ ಮಾರ್ಗಸೂಚಿ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದಿನಾಂಕ: 12-11-2020 ರಂದು ಹೊರಡಿಸಲಾದ ಸುತ್ತೋಲೆಯಲ್ಲಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು “ ಅಮ್ಯೂಸ್‌ ಮೆಂಟ್‌ ಪಾರ್ಕ್‌ ಮತ್ತು ಅಂತಹ ಇತರ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಈ ಪೈಕಿ ಜಲ ಕ್ರೀಡೆ/ಜಲ ಸಂಬಂಧಿತ ಸಾಹಸ ಚಟುವಟಿಕೆ (water sports/water related adventure activities) ಗಳಿಗೆ ಅನುಮತಿ ಇರುವುದಿಲ್ಲ.

    ವಿದ್ಯಾಭ್ಯಾಸದ ಸಲುವಾಗಿ ಕೇರಳ ರಾಜ್ಯದಿಂದ ಉಡುಪಿ ಜಿಲ್ಲೆಗೆ ಆಗಮಿಸುವ ನರ್ಸಿಂಗ್‌, ಮೆಡಿಕಲ್‌, ಇಂಜಿನಿಯರಿಂಗ್‌, ಪ್ಯಾರಾ ಮೆಡಿಕಲ್‌ ಒಳಗೊಂಡಂತೆ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಜಿಲ್ಲೆಗೆ ಪ್ರವೇಶಿಸುವ ಪೂರ್ವದಲ್ಲಿ 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್‌ -19 RTPCR ನೆಗೆಟಿವ್‌ ವರದಿಯನ್ನು ಹೊಂದಿರುವುದು. ಮತ್ತು 7 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್‌ ಒಳಪಡುವುದು ಹಾಗೂ ಕೊನೆಯ ದಿನ RTPCR ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳುವುದು.

    ಉಡುಪಿ ಜಿಲೆಯಲ್ಲಿ ಉದ್ಯೋಗ ಹೊಂದಿದ್ದು, ಕೇರಳ ರಾಜ್ಯದಿಂದ ಉಡುಪಿ ಜಿಲ್ಲೆಗೆ ಆಗಮಿಸುವ ಅಥವಾ ಉಡುಪಿಗೆ ಪ್ರವೇಶಿಸುವ ಹಿಂದಿನ 7 ದಿನಗಳಲ್ಲಿ ಕೇರಳ ರಾಜ್ಯಕ್ಕೆ ಭೇಟಿ ನೀಡಿದ ಎಲ್ಲಾ ಉದ್ಯೋಗಿಗಳಿಗೆ ಮೇಲಿನ 12ನೇ ವಾಕ್ಯವೃಂದದ ಮಾರ್ಗಸೂಚಿಗಳು ಅನ್ವಯವಾಗುತ್ತದೆ. ಇವುಗಳನ್ನು ಜ್ಯಾರಿಗೊಳಿಸುವುದು ಆಯಾ ಆಡಳಿತ ಮಂಡಳಿಗಳು / ಉದ್ಯೋಗದಾತರ ಜವಾಬ್ದಾರಿಯಾಗಿರುತ್ತದೆ.

    https://www.youtube.com/watch?v=659b5Rr-bgk
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025

    ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    18/12/2025

    ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.