ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಸರ್ವಪಲ್ಲಿ ರಾಧಾಕೃ?ನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ., ಸರ್ವಪಲ್ಲಿ ರಾಧಾಕೃಷ್ಣನ್ ಎಲ್ಲಾ ಶಿಕ್ಷಕರಿಗೆ ಮಾದರಿಯಾಗಿದ್ದು, ಮುಂದಿನ ತಲೆಮಾರಿನ ಯುವ ಜನಾಂಗಕ್ಕೆ ಉತ್ತಮ ಮಾರ್ಗ, ಭವ್ಯ ಭವಿ? ರೂಪಿಸುವ ಜವಾಬ್ದಾರಿಯ ಶಿಕ್ಷಕರದ್ದಾಗಿದೆ ಎಂದರು.
ಶಿಕ್ಷಕರಾದ ಅಶೋಕ ದೇವಾಡಿಗ, ಫಿಲೋಮಿನಾ ಫೆರ್ನಾಂಡಿಸ್, ಚಂದ್ರಕಲಾ ಮತ್ತು ಅಕ್ಷತಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಲಯ ಸೇನಾನಿ ಕೆ. ರಾಮನಾಥ ನಾಯಕ್ ಶುಭ ಹಾರೈಸಿದರು. ರೋಟರಿ ಸದಸ್ಯರು ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಕೃ? ಪೂಜಾರಿ ವಂದಿಸಿದರು.