ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬಿಜೆಪಿ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯು ಬೈಂದೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಮತ್ತು ವಿಧಾನ ಪರಿಷತ್ ಸಭಾ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.
ಬೈಂದೂರು ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯ ಚಟುವಟಿಕೆಯ ಬಗ್ಗೆ ಶ್ಲಾಘನೀಯ ಮಾತುಗಳನ್ನಾಡಿದರು. ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಸಂತೋಷ ಪೂಜಾರಿ ಮುಕ್ಕೋಡು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಒಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾದ ಅಶೋಕ ಮೂರ್ತಿ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದ ಸಂಘಟನಾತ್ಮಕ ವಿಷಯಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭ ಜಿಲ್ಲಾ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ಅರುಣ್ ಬಾಣ, ಜಿಲ್ಲಾ ಒಬಿಸಿ ಮೋರ್ಚಾದ ಉಪಾಧ್ಯಕ್ಷರಾದ ಮನೋಜ್ ಕರ್ಕೇರ, ಜಿಲ್ಲಾ ಉಪಾಧ್ಯಕ್ಷರಾದ ಆನಂದ ಖಾರ್ವಿ, ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ್ ಪೂಜಾರಿ ಜೆಡ್ಡು, ಮತ್ತು ಒಬಿಸಿ ಮೋರ್ಚಾದ ಮಂಡಲ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಒಬಿಸಿ ಮೋರ್ಚಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಬೈಂದೂರು ಮಂಡಲದ ಮಹಿಳಾ ಮೋರ್ಚಾದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಎಸ್ಸಿ ಮೋರ್ಚಾದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ, ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರು ಉಪಸ್ಥಿತರಿದ್ದರು.
ಬೈಂದೂರು ಮಂಡಲದ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರ ಜೋಗಿ ಶಾನ್ಕಟ್ಟು ಕಾರ್ಯಕ್ರಮವನ್ನು ನಿರೂಪಿಸಿದರು, ಗಣೇಶ ದೇವಾಡಿಗ ಹೆರಂಜಾಲು ಧನ್ಯವಾದಗೈದರು.