ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ನಿಧನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಕಾಂಗ್ರೆಸ್ ಹಿರಿಯ ಮುಖಂಡ, ರಾಜ್ಯಸಭಾ ಸದಸ್ಯರಾದ ಆಸ್ಕರ್ ಫರ್ನಾಂಡಿಸ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನಗಾರಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

Call us

Click Here

ಯೆನಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಜುಲೈ.18ರಂದು ಆಸ್ಕರ್ ಫೆರ್ನಾಂಡಿಸ್ ಅವರು ಮನೆಯಲ್ಲಿ ಯೋಗ ಮಾಡುತ್ತಿದ್ದ ಸಂದರ್ಭ ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ತಲೆಯ ಒಳಭಾಗಕ್ಕೆ ಪೆಟ್ಟಾಗಿದ್ದರಿಂದ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಕಾಂಗ್ರೆಸ್ ಪ್ರಭಾವಿ ನಾಯಕರಾಗಿದ್ದ, ಗಾಂಧಿ ಕುಟುಂಬಕ್ಕೆ ಆಪ್ತರಾಗಿದ್ದರು. ಆಸ್ಕರ್ ರಾಜ್ಯ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಉಡುಪಿ ಜಿಲ್ಲೆಯಲ್ಲಿ ರಾಜಕೀಯ ಜೀವನ ಆರಂಭಿಸಿದ ಅವರು ಹಂತಹಂತವಾಗಿ ಉನ್ನತ ಸ್ಥಾನಕ್ಕೇರಿದ್ದರು. 1980ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಮೊದಲ ಭಾರಿಗೆ ಸಂಸತ್ ಪ್ರವೇಶ್ ಮಾಡಿದ್ದ ಅವರು ನಾಲ್ಕು ಭಾರಿ ಸಂಸದರಗಿ ಆಯ್ಕೆಯಾಗಿದ್ದರು. ಕೇಂದ್ರ ಸಾರಿಗೆ ಸಚಿವ, ಕಾರ್ಮಿಕ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ ಬ್ಲೋಸಂ ಫೆರ್ನಾಂಡಿಸ್, ಪುತ್ರ ಓಶಾನ್, ಪುತ್ರಿ ಓಶಾನಿ ಸೇರಿದಂತೆ ಕುಟುಂಬಸ್ಥರು ಹಾಗೂ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.

Click here

Click here

Click here

Click Here

Call us

Call us

Leave a Reply