ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿದ್ಯಾಗಮ ಹಾಗೂ ಕರ್ನಾಟಕದ ನಾಲ್ಕು ರೋಟರಿ ಜಿಲ್ಲೆಗಳ ಪ್ರಯೋಜಕತ್ವದ ಮಹತ್ವಾಕಾಂಕ್ಷಿ, ಕನ್ನಡ ಮಾಧ್ಯಮದಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿರುವ ವಿದ್ಯಾರ್ಥಿಗಳ ಪ್ರೋತ್ಸಾಹಕ ‘ವಿದ್ಯಾಸೇತು’ ಪುಸ್ತಕಗಳ ವಿತರಣಾ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಗಂಗೊಳ್ಳಿ ರೋಟರಿ ಅಧ್ಯಕ್ಷ ರಾಜೇಶ್ ಎಂ. ಜಿ., ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ವಿದ್ಯಾರ್ಥಿಗಳು ಈ ಪುಸ್ತಕದ ಸದುಪಯೋಗಪಡಿಸಿಕೊಂಡು ಮುಂಬರುವ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸುವಲ್ಲಿ ಪ್ರಯತ್ನಿಸಬೇಕು ಎಂದರು.
ವಲಯ ಸೇನಾನಿ ಕೆ.ರಾಮನಾಥ್ ನಾಯಕ್ ಮತ್ತು ಉಪಪ್ರಾಂಶುಪಾಲ ಉಮೇಶ್ ಕರ್ಣಿಕ್ ರೋಟರಿಯ ಕಾರ್ಯವನ್ನು ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದರು.
ಶಿಕ್ಷಕರಾದ ಗೋಪಾಲ ದೇವಾಡಿಗ, ಶ್ರೀಲತಾ, ಲವೀನಾ, ಕಚೇರಿ ಸಹಾಯಕ ಶ್ರೀಧರ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು. ರೋಟರಿ ಕಾರ್ಯದರ್ಶಿ ನಾರಾಯಣ ಇ. ನಾಯ್ಕ್ ವಂದಿಸಿದರು.