ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಲಯನ್ಸ್ ಕ್ಲಬ್ ವಡೆರಹೋಬಳಿ, ಕುಂದಾಪುರ ಹಾಗೂ ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು ಇವುಗಳ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ವಿಶೇಷ ಶಾಲೆಗಳ ಶಿಕ್ಷಕರಿಗಾಗಿ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಾಗಾರ ನಡೆಯಿತು.
ಡಿಸ್ಯಾಬಿಲಿಟಿ ಎನ್‌ಜಿಒ ಅಲಯನ್ಸ್ ಮ್ಯಾನೇಜರ್ ರೂಪಲಕ್ಷ್ಮೀ ಅವರು ಕಾರ್ಯಾಗಾರವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿ ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ಕುಂದಾಪುರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್.ಕೆ ಪದ್ಮನಾಭ, ವಿಶೇಷ ಶಾಲಾ ಶಿಕ್ಷಕರಿಗೆ ಅಂಗವಿಕಲರ ಹಕ್ಕುಗಳ ಅಧಿನಿಯಮ -೨೦೧೬ರ ಕುರಿತು ಮಾಹಿತಿಯನ್ನು ನೀಡಿದರು. ಈ ಕಾಯಿದೆಯು ಅಂಗವಿಕಲರ ಹಕ್ಕುಗಳ ರಕ್ಷಣೆಯೊಂದಿಗೆ ವಿವಿಧ ಸವಲತ್ತುಗಳನ್ನು ನೀಡಿದೆ. ವಿಶೇಷವಾಗಿ ಈ ಕಾಯಿದೆಯು ಅಂಗವಿಕಲರ ಬದುಕನ್ನು ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು ಮತ್ತು ಕಾಯಿದೆಯಲ್ಲಿರುವ ಪ್ರಮುಖ ಅಂಶಗಳ ಬಗ್ಗೆ ಮಾಹಿತಿ ನೀಡಿದರು.
ಸಂಸ್ಥೆಯು ಆಯೋಜಿಸಿದ ಯಶೋಗಾನ ಲೇಖನ ಸ್ಪರ್ಧೆಯಲ್ಲಿ ಆಯ್ಕೆಯಾದ ಲೇಖಕರಿಗೆ ನಗದು ಪುರಸ್ಕಾರ ಮತ್ತು ತಲ್ಲೂರು ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಜಗದೀಶ್ ಶೇರೆಗಾರ್, ಸದಸ್ಯರಾದ ಪ್ರವೀಣ್ ಶೆಟ್ಟಿ ಮತ್ತು ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಉಪಸ್ಥಿತರಿದ್ದರು.
ಕಾರ್ಯಕ್ರಮನ್ನು ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಸ್ವಾಗತಸಿದರು. ಟ್ರಸ್ಟಿ ವಸಂತ ಶ್ಯಾನುಬೋಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಡಳಿತಾಧಿಕಾರಿ ಚಂದ್ರಶೇಖರ ವಂದಿಸಿದರು. ಸಹ ಶಿಕ್ಷಕಿ ದೀಪಾ ಕಾರ್ಯಕ್ರಮ ನಿರೂಪಿಸಿದರು. ನಂತರ ಕಾರ್ಯಾಗಾರದಲ್ಲಿ ವಿವಿಧ ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ಮತ್ತು ಗುಂಪು ಚರ್ಚೆ ನಡೆಯಿತು.
![](https://i0.wp.com/kundapraa.com/wp-content/uploads/2021/09/News-handicaped-teachers-mahiti-karyagara-1.jpg?resize=747%2C440&ssl=1)