ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಸೆ.18: ಹೊಳೆಗೆ ಮೀನು ಹಿಡಿಯಲೆಂದು ತೆರಳಿ ನಾಪತ್ತೆಯಾಗಿದ್ದ ಮೀನುಗಾರ ದೇವೇಂದ್ರ ಖಾರ್ವಿ (35) ಮೃತದೇಹ ಗಂಗೊಳ್ಳಿ ಕಳುವಿನ ಬಾಗಿಲು ಎಂಬಲ್ಲಿ ಇಂದು ಬೆಳಿಗ್ಗೆ ದೊರೆತಿದೆ.
ಗಂಗೊಳ್ಳಿ ಬಂದರು ಸಮೀಪ ಗುರುವಾರ ಸಂಜೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ರಾತ್ರಿ ಮನೆಯವರು ಕರೆ ಮಾಡಿದಾಗ ಪ್ರತಿಕ್ರಿಯೆ ಬಾರದಿದ್ದಾಗ ಹುಡುಕಾಟ ನಡೆಸಿದ್ದು ಬಂದರು ಬಳಿ ಹೊಳೆಯಲ್ಲಿ ದೋಣಿ ಸಿಕ್ಕಿತ್ತು. ಮೀನುಗಾರಿಕೆ ನಡೆಸುವಾಗ ಆಯತಪ್ಪಿ ನೀರಿಗೆ ಬಿದ್ದಿರುವ ಶಂಕೆಯಿಂದ ರಾತ್ರಿಯಿಂದ ಶುಕ್ರವಾರ ಸಂಜೆ ತನಕವೂ ಹುಡುಕಾಡ ನಡೆಸಲಾಯಿತು. ಮುಳುಗು ತಜ್ಞರು, ಅಗ್ನಿಶಾಮಕ ದಳದವರು ಕೂಡ ಶೋಧ ಕಾರ್ಯದಲ್ಲಿ ಭಾಗಿಯಾಗಿದ್ದರು. ಮೃತ ದೇವೇಂದ್ರ ಖಾರ್ವಿಯವರು ತಂದೆ, ತಾಯಿ, ಇಬ್ಬರು ಸೋದರ, ಮೂರು ಸೋದರಿಯರನ್ನು ಅಗಲಿದ್ದಾರೆ.
ಇದನ್ನೂ ಓದಿ:
► ಅಳುವೆಕೋಡಿಯಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆ – https://kundapraa.com/?p=52541 .