Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾರತ ವಿಶ್ವಕ್ಕೆ ಸಿರಿ ಧಾನ್ಯ ರಫ್ತು ಮಾಡುವ ಹಬ್ ಆಗಲಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
    ಉಡುಪಿ ಜಿಲ್ಲೆ

    ಭಾರತ ವಿಶ್ವಕ್ಕೆ ಸಿರಿ ಧಾನ್ಯ ರಫ್ತು ಮಾಡುವ ಹಬ್ ಆಗಲಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಮುಂದಿನ 2 ವರ್ಷದ ಅವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಉತ್ಪಾದನೆ ಮಾಡುವುದರ ಜೊತೆಗೆ, ಉತ್ತಮ ಗುಣಮಟ್ಟದ, ನೈಸರ್ಗಿಕ ಅಂಶಗಳನ್ನು ಒಳಗೊಂಡ ಸಿರಿಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರ ಮೂಲಕ, ಭಾರತವು ಇಡೀ ವಿಶ್ವಕ್ಕೆ ಸಿರಿಧಾನ್ಯಗಳನ್ನು ರಫ್ತು ಮಾಡುವ ಹಬ್ ಆಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

    Click Here

    Call us

    Click Here

    ಅವರು ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಶಿವಮೊಗ್ಗ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ, ಅಂತಾರಾಷ್ಟಿçÃಯ ಸಿರಿಧಾನ್ಯ ವರ್ಷ 2023 ಪೌಷ್ಠಿಕತೋಟ ಮತ್ತು ವೃಕ್ಷಾರೋಪಣ ಪ್ರಚಾರಾಂದೋಲನ ಕಾರ್ಯಕ್ರಮವನ್ನು, ಮಹಿಳೆಯರ ಮಡಿಲಿಗೆ ಸಿರಿಧಾನ್ಯಗಳನ್ನು ತುಂಬಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

    ಭಾರತ ಮಳೆಯಾಧಾರಿತ ಕೃಷಿಯನ್ನು ಅವಲಂಬಿಸಿರುವ ರಾಷ್ಟçವಾಗಿದ್ದು, ಇಲ್ಲಿನ ವಾತಾವರಣವು ಸಿರಿಧಾನ್ಯ ಕೃಷಿಗೆ ಸೂಕ್ತವಾಗಿದೆ. ಸಿರಿಧಾನ್ಯಗಳಲ್ಲಿ ರಾಸಾಯನಿಕ ಅಂಶಗಳು ಕಡಿಮೆಯಿದ್ದು, ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ಪ್ರೋಟಿನ್, ವಿಟಮಿನ್ ಅಂಶಗಳಿದ್ದು, ಮಧುಮೇಹ ನಿಯಂತ್ರಣ ಸೇರಿದಂತೆ ಹಲವು ಸಮಸ್ಯೆಗಳಿಗೆ ವೈದ್ಯರು ಶಿಫಾರಸ್ಸು ಮಾಡುತ್ತಿದ್ದಾರೆ. ಅಲ್ಲದೇ ದೇಹದಲ್ಲಿ ರೋಗ ನಿರೋಧಕ ಶಕ್ತಿ ಬೆಳವಣಿಗೆಗೆ ಪೂರಕವಾಗಿದೆ. ಭಾರತದ ಬೇಡಿಕೆಯಂತೆ ವಿಶ್ವಸಂಸ್ಥೆಯು 2023 ನೇ ವರ್ಷವನ್ನು ಅಂತಾರಾಷ್ಟಿçÃಯ ಸಿರಿಧಾನ್ಯ ವರ್ಷವಾಗಿ ಘೋಷಿಸಿದ್ದು, ಈ ಅವಧಿಯಲ್ಲಿ ದೇಶದಲ್ಲಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಬೆಳೆದು, ಅಂತಾರಾಷ್ಟಿçÃಯ ಮಾರುಕಟ್ಟೆಗೆ ರಫ್ತು ಮಾಡುವ ಮೂಲಕ ರೈತರು ಹೆಚ್ಚಿನ ಆದಾಯಗಳಿಸುವುದರ ಜೊತೆಗೆ, ದೇಶವು ಸಿರಿಧಾನ್ಯಗಳನ್ನು ರಫ್ತು ಮಾಡುವ ಹಬ್ ಆಗುವಂತಾಗಬೇಕು ಎಂದು ಸಚಿವರು ಹೇಳಿದರು.

    ಒಂದು ಕಾಲದಲ್ಲಿ ಭಾರತ ಸಿರಿಧಾನ್ಯಗಳನ್ನು ಬೆಳೆಯುವ ಮತ್ತು ಉಪಯೋಗಿಸುವ ವಿಶ್ವದ ಪ್ರಮುಖ ದೇಶವಾಗಿದ್ದು, ಹರಪ್ಪ, ಮೆಹೆಂಜೋದಾರೋ ನಾಗರಿಕತೆಯ ಜನರು ಸಿರಿಧಾನ್ಯಗಳನ್ನು ಸೇವನೆ ಮಾಡುತ್ತಿದ್ದರು ಎಂದು ಸಂಶೋಧನೆಗಳಿAದ ತಿಳಿದುಬಂದಿದೆ. ಕರ್ನಾಟಕದಲ್ಲಿ ಹಿಂದೆ 8 ಲಕ್ಷ ಹೆಕ್ಟರ್ನಲ್ಲಿ ಸಿರಿಧಾನ್ಯಗಳನ್ನು ಬೆಳೆಯುತ್ತಿದ್ದು, ಈಗ ಆ ಪ್ರಮಾಣ 3.5 ಲಕ್ಷ ಹೆಕ್ಟರ್ಗೆ ಇಳಿದಿದೆ. ದೇಶದಾದ್ಯಂತ ಮುಂದಿನ ಎರಡು ವರ್ಷಗಳಲ್ಲಿ ನಿರಂತರವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಿರಿಧಾನ್ಯಗಳ ಉತ್ಪಾದನೆ ಹೆಚ್ಚಿಸಲಾಗುವುದು, ರಾಯಭಾರಿ ಕಚೇರಿಗಳ ಮೂಲಕವೂ ಸಿರಿಧಾನ್ಯಗಳ ಬಳಕೆಯ ಮಹತ್ವ ಕುರಿತು ತಿಳಿಸುವ ಪ್ರಯತ್ನ ನಡೆಯಲಿದೆ ಎಂದರು.

    ಜಿಲ್ಲೆಯಲ್ಲಿ ಕೃಷಿ ಕಾಲೇಜು ಆರಂಭಿಸುವ ಕುರಿತಂತೆ, ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ, ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನೂ ಮಾಡುವುದಾಗಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

    Click here

    Click here

    Click here

    Call us

    Call us

    ಇದೇ ಸಂದರ್ಭದಲ್ಲಿ ಸಿರಿಧಾನ್ಯಗಳಿಂದ ತಯಾರಿಸಿದ ವಿವಿಧ ಉತ್ಪನ್ನಗಳು ಮತ್ತು ಸಿರಿಧಾನ್ಯಗಳ ಕುರಿತ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದ ಸಚಿವರು, ಪೌಷ್ಠಿಕತೋಟ ಮತ್ತು ವೃಕ್ಷಾರೋಪಣ ಪ್ರಚಾರಾಂದೋಲನ ಅಂಗವಾಗಿ ಗಿಡಗಳನ್ನು ವಿತರಿಸಿದರು.

    ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿಯ ಕುಲಪತಿ ಡಾ.ಮಂಜುನಾಥ ಕೆ. ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶಾದ್ಯಂತ 800 ಕೇಂದ್ರಗಳಲ್ಲಿ ಈ ಕಾರ್ಯಕ್ರಮ ಇಂದು ಆರಂಭಿಸಲಾಗಿದ್ದು, ಆರೋಗ್ಯದ ದೃಷ್ಠಿಯಿಂದ ಸಿರಿಧಾನ್ಯಗಳ ಸೇವನೆ ಅತ್ಯಂತ ಪ್ರಯೋಜನವಾಗಿದ್ದು, ಎಲ್ಲಾ ರೀತಿಯ ಪೌಷ್ಠಿಕಾಂಶಗಳು ಇದರಲ್ಲಿ ಇವೆ ಎಂದರು.

    ಕಾರ್ಯಕ್ರಮದಲ್ಲಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಚಾಂತಾರು-ಹೇರೂರು ಗ್ರಾ.ಪಂ ನ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ರಾಜ್ಯ ಮಟ್ಟದ ಸಾವಯುವ ಕೃಷಿ ಉನ್ನತ ಮಟ್ಟದ ಸಮಿತಿ ಸದಸ್ಯ ರಾಘವೇಂದ್ರ ಉಪ್ಪೂರು, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿಯ ವಿಸ್ತರಣಾ ನಿರ್ದೇಶಕ ಡಾ. ಕೆ.ಸಿ. ಶಶಿಧರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಮತ್ತಿತರರು ಉಪಸ್ಥಿತರಿದ್ದರು.

    ವಲಯ ಕೃಷಿ ಮತ್ತುತೋಟಗಾರಿಕೆ ಸಹ ಸಂಶೋಧನಾ ನಿರ್ದೇಶಕ ಡಾ. ಲಕ್ಷö್ಮಣ ಸ್ವಾಗತಿಸಿದರು, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ವಿಜ್ಞಾನಿ ಡಾ.ಬಿ.ಧನಂಜಯ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025

    ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.