Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಪ್ಲೈಓವರ್ ಕೆಳಗಿನ ಸಾಮಾಗ್ರಿಗಳ ರಾಶಿ ತೆರವಿಗೆ ಎಸಿ ಸೂಚನೆ
    ಊರ್ಮನೆ ಸಮಾಚಾರ

    ಕುಂದಾಪುರ ಪ್ಲೈಓವರ್ ಕೆಳಗಿನ ಸಾಮಾಗ್ರಿಗಳ ರಾಶಿ ತೆರವಿಗೆ ಎಸಿ ಸೂಚನೆ

    Updated:18/09/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ:
    ಇಲ್ಲಿನ ಶಾಸ್ತ್ರೀ ವೃತ್ತದ ಬಳಿಯ ಫ್ಲೈಓವರ್ ಕೆಳಭಾಗದಲ್ಲಿದ್ ನವಯುಗ ಕಂಪೆನಿಗೆ ಸೇರಿದ ಸಾಮಾಗ್ರಿಗಳನ್ನು ಮುಂದಿನ ನಾಲ್ಕು ದಿನಗಳಲ್ಲಿ ತೆರವುಗೊಳಿಸಲು ಕುಂದಾಪುರ ಸಹಾಯಕ ಕಮಿಷನರ್ ಕೆ. ರಾಜು ನವಯುಗ ಕಂಪೆನಿಗೆ ಸೂಚನೆ ನೀಡಿದ್ದಾರೆ.

    Click Here

    Call us

    Click Here

    ಅವರು ಕುಂದಾಪುರ ಫ್ಲೈಓವರ್ ಕೆಳಗಿನ‌ ಸಾಮಾಗ್ರಿ ತೆರವು ಕಾರ್ಯಾಚರಣೆ ವೀಕ್ಷಿಸಿದ ಬಳಿಕ ಕುಂದಾಪುರ ಮಿನಿ ವಿಧಾನಸೌಧದಲ್ಲಿ ನವಯುಗ ಇಂಜಿನಿಯರ್ ಜೊತೆ ಸಭೆ ನಡೆಸಿದರು.

    ನಾಲ್ಕು ದಿನಗಳಲ್ಲಿ ಸಾಮಾಗ್ರಿ ತೆರವು ಮಾಡುವುದು, ಕುಂದಾಪುರ ನಗರಕ್ಕೆ ಸಂಪರ್ಕಿಸುವ ದುರ್ಗಾಂಬ ಮೋಟಾರ್ ಎದುರು ‘ಕುಂದಾಪುರ’ ಎಂದು ನಾಮಫಲಕ ಅಳವಡಿಕೆ, ಅಲ್ಲಲ್ಲಿ ಸೂಚನಾ‌ಫಲಕ, ನಾಮಫಲಕ ಅಳವಡಿಕೆ, ಸರ್ವೀಸ್ ರಸ್ತೆಯಿಂದ ಹೆದ್ದಾರಿಗೆ ಸಂಪರ್ಕಿಸುವಲ್ಲಿ ಡಾಂಬಾರು ಹಾಕುವುದು, ಅಂಡರ್ ಪಾಸ್ ಸಮೀಪದ ಸಮಸ್ಯೆಗಳ ಪರಿಹಾರ, ಬೀದಿ ದೀಪಗಳ ನಿರ್ವಹಣೆ ಮಾಡಬೇಕು ಎಂದರು. ಅಲ್ಲದೆ ಇದೇ ತಿಂಗಳ 29ರೊಳಗೆ ಶಾಸ್ತ್ರೀ ವೃತ್ತದ ಸಮೀಪ ಡಾಮರು ರಸ್ತೆ ಕೆಲಸ ಮುಗಿಸಬೇಕು ಎಂದು ಸಂಬಂದಪಟ್ಟವರಿಗೆ ಗಡುವು ನೀಡಿದರು.

    ಡಿವೈಎಸ್ಪಿ ಶ್ರೀಕಾಂತ್ ಕೆ. ಮಾತನಾಡಿ, ನವಯುಗ ಕಂಪೆನಿಯವರು ಬೀದಿ ದೀಪ ಅಳವಡಿಕೆ ಸರಿಯಾಗಿ ಮಾಡದ ಹಿನ್ನೆಲೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಅಪಘಾತ ನಡೆದು ಯಾರಾದರೂ ಸತ್ತರೆ ನಿಮ್ಮನ್ನೇ ಎರಡನೇ ಆರೋಪಿ ಮಾಡುತ್ತೇವೆ ಎಂದು ಗುತ್ತಿಗೆ ಕಂಪೆನಿಗೆ ಎಚ್ಚರಿಕೆ ನೀಡಿದರು. ಪ್ರತಿ 50 ಕಿಲೋಮೀಟರ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಬುಲೆನ್ಸ್ ವಾಹನ ಜಾಗೃತವಾಗಿರಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ನವಯುಗದ ಒಂದೇ ಅಂಬುಲೆನ್ಸ್ ಅಪಘಾತವಾದಾಗ ಸ್ಥಳಕ್ಕೆ ಬಂದಿರುವ ಉದಾಹರಣೆಯಿಲ್ಲ ಎಂದರು.

    ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಪಿಎಸ್ಐ ಸದಾಶಿವ ಗವರೋಜಿ, ಟ್ರಾಫಿಕ್ ಠಾಣೆ ಪಿಎಸ್ಐ ಸುದರ್ಶನ್ ಇದ್ದರು.

    Click here

    Click here

    Click here

    Click Here

    Call us

    Call us

    ಪುರಸಭೆಯಲ್ಲಿ ಸಾಮಾನ್ಯ ಸಭೆಯಲ್ಲಿ ಗಮನಸೆಳೆಯಲಾಗಿತ್ತು:
    ಪ್ಲೈಓವರ್ ಕೆಳಗೆ ಬಿದ್ದ ರಾಶಿಯ ಬಗ್ಗೆ ಪುರಸಭಾ ಸದಸ್ಯ ಗಿರೀಶ್ ದೇವಾಡಿಗ ಅವರು ಸಾಮಾನ್ಯ ಸಭೆಯಲ್ಲಿ ಎತ್ತಿದ ಪ್ರಶ್ನೆಗೆ ಉಳಿದ ಸದಸ್ಯರು ಧ್ವನಿಗೂಡಿಸಿದ್ದರು. ಈ ವೇಳೆ ಹೆದ್ದಾರಿ ಸಮಸ್ಯೆಗಳ ಬಗ್ಗೆ ವಿಶೇಷ ಗಮನ ಸೆಳೆಯಲಾಗಿತ್ತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    two × 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.