ಆಸ್ಕರ್ ಫೆರ್ನಾಂಡಿಸ್ ಅವರು ಅಜಾತಶತ್ರುವಿನಂತೆ ಬದುಕಿದ್ದರು: ಕೆ. ಗೋಪಾಲ ಪೂಜಾರಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಆಸ್ಕರ್ ಫೆರ್ನಾಂಡಿಸ್ ಅವರು ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿದ್ದರು. ಪಕ್ಷ ಕಟ್ಟುವ ಸಂಘಟನಾ ಚತುರತೆ ಹಾಗೂ ಸಾಕಷ್ಟು ಯುವ ನಾಯಕರನ್ನು ಹುಟ್ಟುಹಾಕಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅಜಾತಶತ್ರುವಿನಂತೆ ಬದುಕಿದ್ದ ಅವರನ್ನು ಪಕ್ಷಾತೀತವಾಗಿ ಎಲ್ಲರೂ ಮೆಚ್ಚುತ್ತಿದ್ದರು ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

Call us

Click Here

ಅವರು ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಸೋಮವಾರ ಬೈಂದೂರು ಹಾಗೂ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಕಾಂಗ್ರೆಸ್ ನಾಯಕ ದಿ. ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.

ಈ ಸಂದರ್ಭ ಕಾಂಗ್ರೆಸ್ ಪಕ್ಷದ ನಾಯಕರುಗಳಾದ ಮಂಜುನಾಥ್ ಹೆಬ್ಬಾರ್, ಪಿ.ಎಲ್. ಜೋಸ್, ಅಶೋಕ್ ಶೆಟ್ಟಿ, ಎಸ್. ಕುಮಾರ್, ಲಿಂಗಪ್ಪ, ಲೋಕೇಶ್ ಖಾರ್ವಿ ಅವರಿಗೂ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಕೆಪಿಸಿಸಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಸಂಪಿಗೇಡಿ ಸಂಜೀವ ಶೆಟ್ಟಿ ಮೊದಲಾದವರು ನುಡಿನಮನ ಸಲ್ಲಿಸಿದರು.

ಕಾಂಗ್ರೆಸ್ ಮುಖಂಡರಾದ ವಾಸುದೇವ ಯಡಿಯಾಳ್, ರಘುರಾಮ್ ಶೆಟ್ಟಿ, ರಮೇಶ್ ಗಾಣಿಗ ಕೊಲ್ಲೂರು, ಸಂತೋಷ್ ಶೆಟ್ಟಿ ಹಕ್ಲಾಡಿ, ನಾಗರಾಜ ಗಾಣಿಗ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ ಕುಮಾರ್ ಉಪ್ಪುಂದ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

Leave a Reply