ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ನೆನಪಿನಲ್ಲಿ ನಿರ್ಮಿಸಿದ ಥೀಮ್ ಪಾರ್ಕ್‌ಗೆ ಉಡುಪಿ ಜಿಲ್ಲಾಧಿಕಾರಿಯವರು ಇತ್ತೀಚೆಗೆ ಭೇಟಿ ನೀಡಿ ವೀಕ್ಷಿಸಿದರು. ಕೆರೆಯ ಮಧ್ಯದ ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಂಗ ಮಂದಿರ, ಆರ್ಟ್ ಗ್ಯಾಲರಿ, ಮಿನಿ ಸಭಾಂಗಣ, ಗ್ರಂಥಾಲಯ, ವಿವಿಧ ಕಲಾಕೃತಿ ವೀಕ್ಷಣೆ ಮಾಡಿ ಸುಸಜ್ಜಿತ ವ್ಯವಸ್ಥೆ ಬಗ್ಗೆ ಶ್ಲಾಘಿಸಿದರು.
ಥೀಮ್ ಪಾರ್ಕ್ ಅಭಿವೃದ್ಧಿಗೆ ಸಹಕಾರ
ಕನ್ನಡದ ಹೆಸರಾಂತ ಕವಿ ಕಾರಂತರ ಬದುಕು-ಬರವಣಿಗೆ ಮುಂದಿನ ಜನಾಂಗಕ್ಕೆ ತಲುಪಬೇಕಾದ ಅವಶ್ಯಕತೆಯಿದೆ, ಈ ನಿಟ್ಟಿನಲ್ಲಿ ಥೀಮ್ ಪಾರ್ಕ್‌ನಲ್ಲಿ ವಿವಿಧ ಚಟುವಟಿಕೆ, ಸಾಂಸ್ಕೃತಿಕ, ಸಾಹಿತ್ಯಿಕ ಕಾರ್ಯಕ್ರಮಗಳು ನಡೆಯುತ್ತಿರುವುದು ಸಂತಸದ ವಿಷಯ, ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ಶ್ರೀವಾಸು ಪೂಜಾರಿ, ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಕೋಟ ಕಂದಾಯ ನಿರೀಕ್ಷಕ ರಾಜು, ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ ಸೂರ್ಯ ಉಪಸ್ಥಿತರಿದ್ದರು.