ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಗ್ರಾಮ ಪಂಚಾಯತ್ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಮತ್ತು ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು ಇವರ ಜಂಟಿ ಆಶ್ರಯದಲ್ಲಿ ಪೋ?ಣ್ ಅಭಿಯಾನ ಮತ್ತು ಪೌಷ್ಠಿಕ ಆಹಾರ ಮಾಸಾಚರಣೆ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಗುರುವಾರ ಜರಗಿತು.
ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್ ಎಂ. ಜಿ. ಕಾರ್ಯಕ್ರಮ ಉದ್ಘಾಟಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷ ಎಚ್.ಗಣೇಶ ಕಾಮತ್ ಶುಭಾಶಂಸನೆಗೈದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ ಮತ್ತು ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ವೀಣಾ ಕಾರಂತ್ ಪೌಷ್ಟಿಕ ಆಹಾರದ ಮಾಹಿತಿ, ಪ್ರಾತ್ಯಕ್ಷಿಕೆ ನೀಡಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯೆ ಸಾವಿತ್ರಿ ಖಾರ್ವಿ, ನಿರ್ಮಲಾ ಪೂಜಾರಿ, ಬಿ.ಗಣೇಶ ಶೆಣೈ, ಸಕು ಉದಯ, ಬಿ.ರಾಘವೇಂದ್ರ ಪೈ, ಆಶಾ ಕಾರ್ಯಕರ್ತೆ ಹೇಮಾ ಮತ್ತಿತರರು ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಸ್ವಾಗತಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಎನ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಂಗನವಾಡಿ ಮೇಲ್ವಿಚಾರಕಿ ರಾಜೇಶ್ವರಿ ಕಾರ್ಯಕ್ರಮ ನಿರ್ವಹಿಸಿದರು. ಪೋಷಣ್ ಕಾರ್ಯಕ್ರಮದ ಸಂಯೋಜಕ ಮಂಜುನಾಥ್ ವಂದಿಸಿದರು.