ಬಿಜೆಪಿ ಬೈಂದೂರು ಮಂಡಲದ 246 ಬೂತ್‌ಗಳಲ್ಲಿ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಕಛೇರಿಯಲ್ಲಿ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯರ ೧೦೫ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

Call us

Click Here

246 ಬೂತ್‌ಗಳಲ್ಲಿ ಕಾರ್ಯಕ್ರಮ:
ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ಮಾತನಾಡಿ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯರ 105ನೇ ಜನ್ಮ ದಿನಾಚರಣೆಯನ್ನು ಬಿಜೆಪಿ ಕಛೇರಿಯಲ್ಲಿ ಮಾತ್ರವಲ್ಲದೇ 246 ಬೂತ್‌ಗಳಲ್ಲಿಯೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಪಕ್ಷದ ಪ್ರತಿ ಕಾರ್ಯಕ್ರಮವನ್ನು ತಳಮಟ್ಟದ ಜನರಿಗೂ ತಲುಪಿಸುವ ಉದ್ದೇಶದಿಂದ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಬೈಂದೂರು ಮಂಡಲ ಬಿಜೆಪಿ ಅತ್ಯಂತ ಕ್ರೀಯಾಶೀಲವಾಗಿ ಗರಿಷ್ಠ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಆನಂದ್ ಖಾರ್ವಿ ಉಪ್ಪುಂದ, ಜಿಲ್ಲಾ ಕಾರ್ಯದರ್ಶಿ ಮಾಲತಿ ಬಿ. ನಾಯ್ಕ್, ಜಿಲ್ಲಾ ಕೈಗಾರಿಕಾ ಪ್ರಕೋಷ್ಟ ಸಂಚಾಲಕರಾದ ಬಿ. ಎಸ್. ಸುರೇಶ್ ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಶೇಖರ ಖಾರ್ವಿ ಹಾಗೂ ಮಾಲಿನಿ ಕೆ, ಮಹಿಳಾ ಮೋರ್ಚಾ ಅಧ್ಯಕ್ಷರಾಧ ಭಾಗೀರಥಿ ಸುರೇಶ್, ಎಸ್. ಸಿ ಮೋರ್ಚಾ ಅಧ್ಯಕ್ಷರಾದ ಚಂದ್ರ ಪಂಚವಟಿ ಮತ್ತಿತರರು ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಸ್ವಾಗತಿಸಿ ವಂದಿಸಿದರು.

Leave a Reply