ಗೋವಿಂದ ಬಾಬು ಪೂಜಾರಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಏಷ್ಯಾ ವೇದಿಕ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿಯು ಬೆಂಗಳೂರಿನಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

Call us

Click Here

ಸ್ವಂತ ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡ ಉದ್ಯಮಿ ಗೋವಿಂದ ಬಾಬು ಪೂಜಾರಿ ಶೆಫ್ಟಾಕ್ ಪುಡ್ & ಹಾಸ್ಪಿಟಾಲಿಟಿ ಸಂಸ್ಥೆಯಿಂದ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಕರೋನಾ ಸಂದರ್ಭದಲ್ಲಿ ಸಾವಿರಾರು ಬಡ ಕುಟುಂಬಗಳಿಗೆಪುಡ್ ಕಿಟ್ ವಿತರಿಸಿದ್ದಾರೆ. ಹೂಟ್ಟೂರಿನಲ್ಲಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಸೂರಿಲ್ಲದವರಿಗೆ ಮನೆ ನಿರ್ಮಿಸಿಕೊಟ್ಟು ಬಡಕುಟುಂಬಗಳಿಗೆ ನೆರಳಾಗಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಕುಡಿಯುವ ನೀರಿನ ದಾಹ ತೀರಿಸಿದ್ದು ಸೇರಿದಂತೆ ಹತ್ತಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ನಾಯಕತ್ವದ ಕೌಶಲ್ಯ ಮತ್ತು ಶ್ರಮದ ದುಡಿಮೆ ಮೂಲಕ ಯಶಸ್ಸು, ಪ್ರಸಿದ್ಧಿ ಗಳಿಸಿರುವ ಇವರು ಹುಟ್ಟೂರು ಉಪ್ಪುಂದದಲ್ಲಿ ಜನೋಪಕಾರಿ ಸಂಸ್ಥೆಯೊಂದು ಇರಬೇಕೆಂಬ ಆಶಯದಿಂದ 2015ರಲ್ಲಿ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿಯನ್ನು ತೆರೆದು ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರರಾದರು. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗದ ಜನರಿಗೆ ಆರೋಗ್ಯ, ಮನೆ ನಿರ್ಮಾಣ, ಕೋವಿಡ್ ಕಾಲದಲ್ಲಿ ನೆರವು ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವು ಸೇರಿದಂತೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ವಿವಿಧ ಸೇವಾ ಚಟುವಟಿಕೆಯಲ್ಲಿಯು ತೊಡಗಿಸಿಕೊಂಡಿದ್ದಾರೆ.

ಗೋವಿಂದ ಬಾಬು ಪೂಜಾರಿ ಅವರ ಉದ್ಯಮ ಕ್ಷೇತ್ರ, ಸಾಮಾಜಿಕ, ಸೇವಾ ಕ್ಷೇತ್ರಗಳ ಕಾರ್ಯವನ್ನು ಗುರುತಿಸಿ ಹಲವು ಪ್ರಶಸ್ತಿ ಸನ್ಮಾನಗಳು ಅರಸಿ ಬಂದಿವೆ.

Leave a Reply