ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಅಂಪಾರು ರೋಟರಿ ಕ್ಲಬ್‌ನಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮದಡಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಸುಭಾಸ್ ಶೆಟ್ಟಿ ಕೊಡ್ಲಾಡಿ ಮಾತನಾಡಿ, ಶಿಕ್ಷಕರು ಒಂದು ರಾಷ್ಟ್ರದಲ್ಲಿ ಅಲ್ಲಿನ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ವಿದ್ಯಾರ್ಥಿಗಳ ಮೂಲಕ ಭವಿಷ್ಯಕ್ಕೆ ಕೊಂಡೊಯ್ಯುವ ರಾಯಭಾರಿಗಳು ಎಂದರು.
ನಿವೃತ್ತ ಶಿಕ್ಷಕರಾದ ನರಸಿಂಹ ನಾಯಕ್ ಮೂಡುಬಗೆ, ನಿವೃತ್ತ ಮುಖ್ಯೋಪಾಧ್ಯಾಯರಾದ ನರಸಿಂಹ ನಾಯಕ್ ಮೂಡುಬಗೆ, ಜ್ಞಾನಸುಧಾ ಪದವಿಪೂರ್ವ ಕಾಲೇಜ್ ಕಾರ್ಕಳ ಇಲ್ಲಿನ ಉಪನ್ಯಾಸಕ ಎಂ. ರವಿ ಅವರನ್ನು ಸನ್ಮಾನಿಸಲಾಯಿತು.
ಅಧ್ಯಕ್ಷತೆಯನ್ನು ಅಂಪಾರು ರೋಟರಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ವಹಿಸಿದ್ದರು. ರೋಟರಿ 3182 ವಲಯ 2ರ ಅಸಿಸ್ಟೆಂಟ್ ಗವರ್ನರ್ ಧನಂಜಯ ಪ್ರಭು ಉಪಸ್ಥಿತರಿದ್ದರು. ಆನಂದ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಭುಜಂಗ ಶೆಟ್ಟಿ ಉಪಸ್ಥಿತರಿದ್ದರು. ಎಂ.ಎನ್ ಸಿಂಹ ಪ್ರಾರ್ಥಿಸಿದರು. ಕಾರ್ಯದರ್ಶಿ ಗುರುರಾಜ್ ಶೆಟ್ಟಿ ವಂದಿಸಿದರು.