ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಡಾ. ಕಾರಂತ ಟ್ರಸ್ಟ್(ರಿ)ಉಡುಪಿ ಇವರ ಸಹಯೋಗದಲ್ಲಿ ನಡೆಯುವ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ 17ನೇ ವರ್ಷದ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಶೀರ್ಷಿಕೆ ನಿರೂಪಿತ-2021(ಎಣೆಯಿಲ್ಲದ ಚಕಿತ) ಅನಾವರಣವನ್ನು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ಅವರು ಅನಾವರಣಗೊಳಿಸಿದರು.
ಕಾರಂತ ಹುಟ್ಟೂರ ಪ್ರಶಸ್ತಿ 2021ನೆ ಸಾಲಿನಲ್ಲಿ 140ಕ್ಕೂ ಮಿಕ್ಕಿ ತೂಗುಸೇತುವೆ ನಿರ್ಮಿಸಿ ಸಾಧನೆ ಮಾಡಿದ ಗಿರೀಶ್ ಭಾರಧ್ವಜ್ ಅವರಿಗೆ ಅಕ್ಟೋಬರ್ 10 ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನೀಡಲಾಗುವುದು ಈ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು.
ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಮಾತನಾಡಿ ಕಾರಂತೋತ್ಸವ ಅಕ್ಟೋಬರ್ 1ರಿಂದ 10 ತನಕ ನಡೆಯಲಿದ್ದು ವೆಬಿನಾರ್, ಸಂಗೀತ ಲಹರಿ, ಕಾರಂತ ಚಿಂತನ, ಯಕ್ಷಗುಂಜನ, ಸಾಹಿತ್ಯಿಕ-ಸಾಂಸ್ಕೃತಿಕ ಕಾರ್ಯಕ್ರಮ ಆನ್‌ಲೈನ್ ನಡೆಯಲಿದ್ದು ಕಾರಂತ ಥೀಮ್ ಪಾರ್ಕ್ ಫೇಸ್ ಬುಕ್ ಹಾಗೂ ಯುಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕಾರಂತ ಥೀಮ್ ಪಾರ್ಕ್‌ನ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ, ಪಿ.ಡಿ.ಓ ಶೈಲಾ ಎಸ್ ಪೂಜಾರಿ ಪಂಚಾಯತ್ ಹಾಗೂ ಕಾರಂತ ಪ್ರತಿಷ್ಠಾನದ ಸದಸ್ಯರು, ಕಾರಂತ ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.