ಗುಜ್ಜಾಡಿ ಮಾರಿಕಾಂಬ ಮಹಿಳಾ ಸಹಕಾರಿ ಸಂಘದ ಮಹಾಸಭೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಗುಜ್ಜಾಡಿಯ ಮಾರಿಕಾಂಬ ಮಹಿಳಾ ಸಹಕಾರಿ ಸಂಘದ 2020-21ನೇ ಸಾಲಿನ ಮಹಾಸಭೆ ತ್ರಾಸಿಯ ಅಂಬೇಡ್ಕರ್ ಸಭಾಭವನದಲ್ಲಿ ಜರಗಿತು.

Call us

Click Here

ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ನಿರ್ದೇಶಕರಾದ ವಿಜಯ ಬಿ.ಗಾಣಿಗ, ಸುರೇಖಾ ಕಾನೋಜಿ, ಮಹಾಲಕ್ಷ್ಮೀ, ಶಾರದಾ, ಶಾಂತ, ಚೌಕಿ ಪುಷ್ಪಾ ಖಾರ್ವಿ, ಲಲಿತಾ ಖಾರ್ವಿ, ಶ್ಯಾಮಲಾದೇವಿ, ರತ್ನಾ ಟಿ.ದೇವಾಡಿಗ, ಶಾಂತ ಮರಾರಿ ನಾಯ್ಕ್ ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾಮಿಲಿಂಗೇಶ್ವರ 2020-21ನೇ ಸಾಲಿನ ಲೆಕ್ಕಪರಿಶೋಧನೆ ವರದಿ ಮಂಡಿಸಿದರು.

ಸಂಘದ ಸಿಬ್ಬಂದಿ ಶ್ರೀಲವಿ ಸ್ವಾಗತಿಸಿದರು. ಭಾಸ್ಕರ ಗಾಣಿಗ ಕೊಡಪಾಡಿ ಕಾರ್ಯಕ್ರಮ ನಿರ್ವಹಿಸಿದರು. ನಿರ್ದೇಶಕಿ ರೇಖಾ ಖಾರ್ವಿ ವಂದಿಸಿದರು.

Leave a Reply