ಬೈಂದೂರು: ಹುಚ್ಚುನಾಯಿ ರೋಗ (ರೇಬಿಸ್) ನಿರೋಧಕ ಲಸಿಕಾ ಶಿಬಿರ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಉಡುಪಿ ಜಿ.ಪಂ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಡುಪಿ ಜಿಲ್ಲೆ, ಪಶು ಆಸ್ಪತ್ರೆ ಬಂದೂರು ಹಾಗೂ ಪಟ್ಟಣ ಪಂಚಾಯತ್ ಬಂದೂರು, ಆಜಾದಿ ಕಾ ಅಮೃತ ಮಹೋತ್ಸವ ಇದರ ವತಿಯಿಂದ ವಿಶ್ವ ರೇಬಿಸ್ ದಿನಾಚರಣೆಯ ಅಂಗವಾಗಿ ಉಚಿತ ಹುಚ್ಚುನಾಯಿ ರೋಗ (ರೇಬಿಸ್)ನಿರೋಧಕ ಲಸಿಕಾ ಶಿಬಿರ ಉದ್ಘಾಟನೆ ಕಾರ್ಯಕ್ರಮ ಪಶು ಆಸ್ಪತ್ರೆ ಬಂದೂರು ಆವರಣದಲ್ಲಿ ನಡೆಯಿತು.

Call us

Click Here

ಬೈಂದೂರು ತಹಶೀಲ್ದಾರ ಶೋಭಾಲಕ್ಷ್ಮಿ ಎಚ್. ಎಸ್. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೆಲವು ರೋಗ ತಡೆಗಟ್ಟುವುದು ಅತ್ಯಗತ್ಯ. ರೇಬಿಸ್ ಹಾಗೂ ಕೊರೋನಾದಂತಹ ರೋಗಗಳ ವಿರುದ್ದ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇಂತಹ ಅಭಿಯಾನಗಳು ಇಲಾಖೆ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದು ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ. ಪಶುಸಂಗೋಪನಾ ಇಲಾಖೆ ತಾಲೂಕಿನ ವಿವಿಧ ಕಡೆಗಳಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಶಿಬಿರಗಳನ್ನು ನಡೆಸುತ್ತಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ್ ಅಧಿಕಾರಿ ನವೀನ್ ಕುಮಾರ್, ಹಿರಿಯ ಪಶು ವೈದ್ಯ ಪರೀಕ್ಷಕ ಕಾಳಿಂಗ ಕೊಠಾರಿ, ಸಿಬ್ಬಂದಿಗಳಾದ ರಾಘವೇಂದ್ರ, ಪಾರ್ವತಿ ಹಾಜರಿದ್ದರು.

ಈ ಸಂದರ್ಭ ಸುಮಾರು 50 ಶ್ವಾನಗಳಿಗೆ ಉಚಿತ ರೇಬಿಸ್ ಚಿಕಿತ್ಸೆಯನ್ನು ನೀಡಲಾಯಿತು. ಪಶು ವೈದ್ಯಾಧಿಕಾರಿ ಡಾ. ನಾಗರಾಜ್ ಮರವಂತೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply