Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನಲ್ಲಿ ‘ಗಾಂಧಿ ಸಾಗರದ ಬಿಂದುಗಳು’ ಕೃತಿ ಅವಲೋಕನ
    alvas nudisiri

    ಆಳ್ವಾಸ್‌ನಲ್ಲಿ ‘ಗಾಂಧಿ ಸಾಗರದ ಬಿಂದುಗಳು’ ಕೃತಿ ಅವಲೋಕನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಸ್ವಾಸ್ಥ್ಯ ಸಮಾಜಕ್ಕೆ ಗಾಂಧಿ ತತ್ವಗಳು ಅವಶ್ಯ ಎಂದು ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಕೃಷ್ಣರಾಜ ಕರಬ ಹೇಳಿದರು.

    Click Here

    Call us

    Click Here

    ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ನಡೆದ ಸದಾನಂದ ನಾರಾವಿಯವರ ‘ಗಾಂಧಿ ಸಾಗರದ ಬಿಂದುಗಳು’ ಕೃತಿ ಅವಲೋಕನ ಕಾರ್ಯಕ್ರಮದಲ್ಲಿ ಕೃತಿಯನ್ನು ವಿಮರ್ಶಿಸಿ ಮಾತನಾಡಿದ ಅವರು, ಸಮಾಜದಲ್ಲಿ ಶೋಷಣೆಗೆ ಒಳಾಗಾದ ಪಂಗಡ ಮತ್ತು ಗ್ರಾಮೀಣ ಜನರ ನೋವಿಗೆ ಸ್ಪಂದಿಸುವ ಗುಣ ಬೆಳಸಿಕೊಂಡರೆ, ಜಗತ್ತಿನ ಕಷ್ಟಗಳಿಗೆ ಸ್ಪಂದಿಸುವ ಸಾಮರ್ಥ್ಯ ಬೆಳೆಯುತ್ತದೆ. ಜಾತಿ ಲೆಕ್ಕಾಚಾರ ಇರದೇ ಸರ್ವ ಧರ್ಮ ಸಹಿಷ್ಣು ಭಾವನೆ ಎಲ್ಲರಲ್ಲೂ ಇರಬೇಕು, ಗಾಂಧೀಜಿಯು ಎಲ್ಲ ಧರ್ಮವನ್ನು ಗೌರವಿಸುವವರು, ಗಾಂಧಿ ತತ್ವಗಳಿಂದ ಸಮಾಜದ ಸ್ವಾಸ್ಥ್ಯತೆ ಹೆಚ್ಚುತ್ತದೆ. ಇಂತಹ ಕೃತಿಗಳನ್ನು ಪಠ್ಯ ಪುಸ್ತಕಕ್ಕೆ ಸೇರಿಸಿದರೆ ವಿದ್ಯಾರ್ಥಿಗಳಲ್ಲಿ ರಾಷ್ಟ್ರ ನಿರ್ಮಾಣದ ಚಿಂತನೆಗಳು ಬೆಳೆಯುತ್ತದೆ ಎಂದು ಹೇಳಿದರು.

    ಇದೇ ಸಂರ್ದಭದಲ್ಲಿ ‘ಗಾಂಧಿ ಸಾಗರದ ಬಿಂದುಗಳು’ ಪುಸ್ತಕದ ಲೇಖಕರಾದ ಸದಾನಂದ ನಾರವಿ, ಬದುಕಿನಲ್ಲಿ ಮೌಲ್ಯಗಳು ಬಹಳ ಮುಖ್ಯ ಹಾಗೂ ಅವುಗಳು ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತದೆ. ಮೌಲ್ಯಗಳಿಲ್ಲದ ಮತ್ತು ವಿದ್ಯೆಯಿಲ್ಲದ ಮನುಷ್ಯರಿಗೆ, ಬೆಲೆ ಇರುವುದಿಲ್ಲ. ಕೆಲವೊಮ್ಮೆ ವಿದ್ಯೆ ಇರುವವನಿಗೆ ಹೆದರಿಕೆಯಿಂದಲೂ ಗೌರವ ಕೊಡುತ್ತಾರೆ, ಅದೇ ಮೌಲ್ಯಗಳಿರುವ ಮನುಷ್ಯರಿಗೆ ಅವರ ಆದರ್ಶಗಳೇ ಗೌರವ ತಂದು ಕೊಡುತ್ತದೆ. ಮಾನವೀಯ ಮೌಲ್ಯಗಳ ಚಿಂತನೆಗಳು ನಶಿಸಿ ಹೋಗದಂತೆ ನೋಡಿಕೊಂಡು ಮುಂದಿನ ಪೀಳಿಗೆಗೆ ತಲುಪುವಂತೆ ಮಾಡಬೇಕು ಎಂದು ತಮ್ಮ ಅಭಿಪ್ರಾಯಪಟ್ಟರು.

    ಕಾರ್ಯಕ್ರಮದಲ್ಲಿ ಕನ್ನಡ ವಿಭಾಗ ಮುಖ್ಯಸ್ಥ ಡಾ. ಯೋಗಿಶ್ ಕೈರೋಡಿ, ಉಪನ್ಯಾಸಕ ಹರೀಶ್ ಟಿ ಜಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಉಮಾಶ್ರೀ ವಂದಿಸಿದರು, ಉಪನ್ಯಾಸಕಿ ಡಾ. ಜ್ಯೋತಿ ರೈ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    30/04/2026
    Leave A Reply Cancel Reply

    1 × 5 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.