ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತವು ಅ.6ರಂದು 20 ವರ್ಷ ಪೂರೈಸಲಿದ್ದು, ಇದರ ಅಂಗವಾಗಿ ಯುವಮೋರ್ಚಾ ಉಡುಪಿ ಜಿಲ್ಲೆ ಹಾಗೂ ಯುವಮೋರ್ಚಾ ಬೈಂದೂರು ಇವರ ಸಹಭಾಗಿತ್ವದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸ್ನಾನ ಘಟ್ಟದ ನದಿಯ ತಟವನ್ನು ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭ ಇಂಧನ ಸಚಿವರಾದ ವಿ. ಸುನೀಲ್ ಕುಮಾರ್, ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಜಯಾನಂದ ಹೋಬಳಿದಾರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ವಿಕ್ಯಾತ್ ಶೆಟ್ಟಿ, ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಭಿರಾಜ್ ಸುವರ್ಣ, ಅಕ್ಷಿತ್ ಶೆಟ್ಟಿ ಹೆರ್ಗ, ಮಂಡಲ ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಯು.ಮೋ ಪ್ರಧಾನ ಕಾರ್ಯದರ್ಶಿ ಆಕಾಶ್ ಪೂಜಾರಿ, ಕೊಲ್ಲೂರು ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಶೆಟ್ಟಿ, ಸಂದೀಪ್ ಕೊಲ್ಲೂರು, ಉಮೇಶ್ ಶೆಟ್ಟಿ ಕಲ್ಗದ್ದೆ, ಅನುರ್ ಮೆಂಡನ್ ಪಕ್ಷದ ಕಾರ್ಯಕರ್ತರು ಈ ವೇಳೆ ಇದ್ದರು.