ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದಲ್ಲಿ 32ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಾರಂಭ ಅ.12ರಿಂದ ಅ.14ರ ತನಕ ನಡೆಯಲಿದೆ.
ಅ.12ರ ಮಂಗಳವಾರ ಬೆಳಿಗ್ಗೆ ಶ್ರೀ ಶಾರದಾಂಬೆಯ ಮೂರ್ತಿ ಪ್ರತಿಷ್ಠಾಪನೆ, ಮಧ್ಯಾಹ್ನ ದುರ್ಗಾ ಹೋಮ, ಪೂಜೆ, ರಾತ್ರಿ ಶ್ರೀ ತಿರುಮಲ ವೆಂಕಟರಮಣ ಭಜನಾ ಮಂಡಳಿ ನೇತೃತ್ವದಲ್ಲಿ ಆಹ್ವಾನಿತ ಭಜನಾ ತಂಡಗಳಿಂದ ಅಹೋರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದ. ಅ.13ರ ಬುಧವಾರ ವಿವಿಧ ಪೂಜಾ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ರಾತ್ರಿ 8.30ಕ್ಕೆ ಶ್ರೀ ಲಕ್ಷ್ಮೀ ವೆಂಕಟರಮಣ ಮಹಿಳಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಅ.14ರ ಗುರುವಾರ ಮಧ್ಯಾಹ್ನ 12ರಿಂದ ಮಹಾ ಅನ್ನಸಂತರ್ಪಣೆ ಹಾಗೂ ಸಂಜೆ ಶ್ರೀ ಶಾರದಾಂಬೆ ವಿಗ್ರಹ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ ಎಂದು ಅಧ್ಯಕ್ಷ ಮಂಜುನಾಥ ಆಚಾರ್ಯ ತಿಳಿಸಿದ್ದಾರೆ.