ಜವಾಹರ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯ ಹೆಬ್ರಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2022ನೇ ಸಾಲಿಗೆ 6 ಮತ್ತು 9 ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಹಾಗೂ 9ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.

Call us

Click Here

ಜವಾಹರ ನವೋದಯ ವಿದ್ಯಾಲಯದಲ್ಲಿ ಉಚಿತವಾಗಿ ಮಕ್ಕಳಿಗೆ ಆಧುನಿಕ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಶಿಕ್ಷಣ, ಯೋಗ, ವಾಚನಾಲಯದ ಸೌಲಭ್ಯ ಸಂಗೀತ, ನೃತ್ಯ, ಕರಾಟೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅವಕಾಶವಿದ್ದು, ವಿಶಾಲವಾದ ಪ್ರಯೋಗ ಶಾಲೆಗಳನ್ನು ಸುಂದರವಾದ ಕಟ್ಟಡವನ್ನು ಹೊಂದಿದೆ.

ಪ್ರಸುತ್ತ ಉಡುಪಿ ಜಿಲ್ಲೆಯಲ್ಲಿ 5 ಹಾಗೂ 8ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳು ಅರ್ಜಿ ಸಲ್ಲಿಸಲು ವೆಬ್‌ಸೈಟ್ https://navodaya.gov.in/nvs/en/Home1 ಅಥವಾ ಹೆಚ್ಚಿನ ಮಾಹಿತಿಗಾಗಿ 9880588736/08253-251260 ನ್ನು ಸಂಪರ್ಕಿಸುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

Leave a Reply