ಶೋಷಿತರ ಪರ ಧ್ವನಿಯಾಗಿ ನಿಂತವರು ಕಾರಂತರು: ನೀಲಾವರ ಸುರೇಂದ್ರ ಅಡಿಗ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಕಾರಂತರು ಶೋಷಿತರ ಪರವಾಗಿ ಸಮಾಜದಲ್ಲಿ ಧ್ವನಿ ಎತ್ತಿದವರು, ಅವರ ಕಾದಂಬರಿಯಲ್ಲೂ ಇದರ ಬಗ್ಗೆ ಬೆಳಕು ಚೆಲ್ಲುವುದರ ಮೂಲಕ ಸಮಾಜದ ಅಂಕು ಡೊಂಕುಗಳಿಗೆ ತಿದ್ದುವ ಪ್ರಯತ್ನ ಮಾಡಿದ್ದಾರೆ. ಧನಾತ್ಮಕ ಚಿಂತನೆ, ಪರಿಸರದ ಬಗ್ಗೆ ಕಾಳಜಿ, ಮಾನವೀಯ ಮೌಲ್ಯಗಳನ್ನು ಒಳಗೊಂಡ ಕಾರಂತರು ವಿಶ್ವಮಾನವ ಸಂದೇಶ ಜಗತ್ತಿಗೆ ಸಾರಿದವರು ಅದರಂತೆ ಬದುಕಿದ ಅವರ ಬದುಕೆ ನಮಗೆಲ್ಲ ಮಾದರಿ ಎಂದು ಉಡುಪಿ ಜಿಲ್ಲಾ ಕ.ಸಾ.ಪ ನಿಕಟ ಪೂರ್ವಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಹೇಳಿದರು.

Call us

Click Here

ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ17ನೇ ವರುಷದ ಸಂಭ್ರಮದ ಸಾಹ್ಯಿತ್ಯಿಕ -ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿತ-2021(ಎಣೆಯಿಲ್ಲದ ಚಕಿತ) ಕಾರ್ಯಕ್ರಮದ ಎಂಟನೇ ದಿನದ ಕಾರಂತ ಚಿಂತನ ಹಾಗೂ ನೆನಪು ಫೌಂಡೇಶನ್ ರಿ. ಸಾಸ್ತಾನ ಇವರಿಂದ ಡಾ. ರಾಜ್ ಗಾನಾಮೃತ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ ಪರಿಸರದ ನಡುವೆ ಸಂಬಂಧ ಬೇಸೆಯುವ ಗಿರೀಶ್ ಭಾರದ್ವಜ್ ಅವರಿಗೆ ಹುಟ್ಟೂರ ಪ್ರಶಸ್ತಿ ನೀಡುತ್ತಿರುವುದು ಕಾರಂತರೂ ಕೂಡ ಮೆಚ್ಚುವ ವಿಷಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರಂತ ಪ್ರತಿಷ್ಠಾನದ ಟ್ರಸ್ಟಿ ಇಬ್ರಾಹೀಂ ಸಾಹೇಬ್ ವಹಿಸಿದ್ದು ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ರೋಬರ್ಟ ರೋಡ್ರಿಗಸ್, ಸರಸ್ವತಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮ ಸ್ವಾಗತಿಸಿ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಪ್ರಸ್ತಾಪಿಸಿ, ಕೋಟತಟ್ಟು ಗ್ರಾಮ ಪಂಚಾಯತ್ ಪಿ.ಡಿ.ಓ ಶೈಲಾ ಎಸ್ ಪೂಜಾರಿ ಅವರು ವಂದಿಸಿ ಪಂಚಾಯತ್ ಕೋಟತಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಶೈಲಜಾ ಕೆ ಎನ್ ನಿರೂಪಿಸಿದರು.

Click here

Click here

Click here

Click Here

Call us

Call us

Leave a Reply