ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಅಖಿಲ ಭಾರತ ನಿಮಾ೯ಣ ಕಾರ್ಮಿಕರ ಫೆಡರೇಶನ್ (CWFI) ಸಂಯೋಜಿಸಲ್ಪಟ್ಟ ಕನಾ೯ಟಕ ರಾಜ್ಯ ಕಟ್ಟಡ ಮತ್ತು ಇತರೆ ನಿಮಾ೯ಣ ಕಾರ್ಮಿಕರ ಫೆಡರೇಶನ್ ರಾಜ್ಯ ಸಮಿತಿ ಕರೆಯ ಮೇರೆಗೆ ರಾಜ್ಯ ವ್ಯಾಪಿ ಜರಗುವ ಕಟ್ಟಡ ಕಾರ್ಮಿಕರ ಬೇಡಿಕೆ ದಿನಾಚರಣೆಯ ಅಂಗವಾಗಿ ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿಮಾ೯ಣ ಕಾರ್ಮಿಕರ ಸಂಘ ರಿ. ಇದರ ನೇತೃತ್ವದಲ್ಲಿ ಇಂದು ಬೈಂದೂರು ಸಿಐಟಿಯು ಕಚೇರಿ ಬಳಿ ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ ನಡೆಯಿತು.
ಮದುವೆ ಸಹಾಯಧನದ ಮೊತ್ತ ರೂಪಾಯಿ ಒಂದು ಲಕ್ಷಕ್ಕೆ ಹೆಚ್ಚಿಸಬೇಕು,ಸಹಜ ಮರಣ ಪರಿಹಾರ ರೂಪಾಯಿ ಎರಡು ಲಕ್ಷಕ್ಕೆ ಹೆಚ್ಚಿಸಬೇಕು. ಮನೆ ನಿಮಾ೯ಣಕ್ಕೆ ರೂಪಾಯಿ ಐದು ಲಕ್ಷ ಸಹಾಯಧನ ನೀಡಬೇಕು.ಹೆರಿಗೆ ಭತ್ಯೆಯನ್ನು ಪುರುಷ ಫಲಾನುಭವಿಯ ಪತ್ನಿಗೂ ವಿಸ್ತರಿಸಬೇಕು, ಅಡುಗೆ ಅನಿಲ, ಕನ್ನಡಕ, ಅಂಗವಿಕಲ ಪರಿಕರ ಕೊಳ್ಳಲು ಸಹಾಯಧನ, ಕಾರ್ಮಿಕರ ಮಕ್ಕಳಿಗೆ ಮೆರಿಟ್ ವಿದ್ಯಾಥಿ೯ ವೇತನ ಜಾರಿಮಾಡಬೇಕು ಇತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಯಿತು.
ಮುಖಂಡರಾದ ರಾಜೀವ ಪಡುಕೋಣೆ, ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಶ್ರೀಧರ ಉಪ್ಪುಂದ, ಅಮ್ಮಯ್ಯ ಪೂಜಾರಿ, ವೆಂಕಟೇಶ್ ಕೋಣಿ ಮೊದಲಾದವರು ಉಪಸ್ಥಿತರಿದ್ದರು.