ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ರಾಮಕ್ಷತ್ರಿಯ ಯುವಕ ಸಮಾಜದಿಂದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ 35ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭದಲ್ಲಿ ಶುಕ್ರವಾರ ಶಾರದಾ ಪುರಮೆರವಣಿಗೆ ಶಾರದಾ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ನಡೆಯಿತು.
ಪುರಮೆರವಣಿಗೆಯಲ್ಲಿ ಚಂಡೆ ವಾದನ ಹಾಗೂ ಇನ್ನಿತರ ಕಲಾತಂಡಗಳು ಪುರಮೆರವಣಿಗೆಗೆ ಮೆರಗು ನೀಡಿದ್ದವು. ಈ ವೇಳೆ ಶಾರದೋತ್ಸವ ಸಮಿತಿಯ ಅಧ್ಯಕ್ಷರಾದ ದಿನಕರ ಪಟ್ವಾಲ್, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ದಡ್ಡು, ಗೌರವ ಅಧ್ಯಕ್ಷ ಗುರುರಾಜ ಹೋಬಳಿದಾರ್, ಕಾರ್ಯದರ್ಶಿ ರಾಘವೇಂದ್ರ ಎನ್. ತಗ್ಗರ್ಸೆ ಭಾಗವಹಿಸಿದ್ದರು.
