ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕೆನರಾ ಬ್ಯಾಂಕ್ ವತಿಯಿಂದ ಶ್ರೀ ಶಾರದಾ ಮಂಟಪಕ್ಕೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಲಾಯಿತು.
ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕಿನ ಉಡುಪಿ ವಿಭಾಗೀಯ ಕಛೇರಿಯ ಸಹಾಯಕ ಮಹಾಪ್ರಬಂಧಕ ಕೆ.ಕಾಳಿ ಅವರು ಕೆನರಾ ಬ್ಯಾಂಕ್ ವತಿಯಿಂದ ಕೊಡಮಾಡಿದ ಶುದ್ಧ ಕುಡಿಯವ ನೀರಿನ ಘಟಕವನ್ನು ಶ್ರೀ ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ಜಿ.ನಾರಾಯಣ ಆಚಾರ್ಯ ಮತ್ತು ಅಧ್ಯಕ್ಷ ಸತೀಶ ಜಿ. ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭ ಕೆನರಾ ಬ್ಯಾಂಕಿನ ಡಿವಿಜನಲ್ ಮ್ಯಾನೇಜರ್ ರತ್ನಾಕರ ಗಾಣಿಗ, ಗಂಗೊಳ್ಳಿ ಶಾಖಾ ಪ್ರಬಂಧಕ ವಿಷ್ಣುಮೂರ್ತಿ ಯಾಜಿ, ಶ್ರೀ ಶಾರದೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರ ಪಟೇಲ್, ಕಾರ್ಯದರ್ಶಿ ಗೋಪಾಲ ಖಾರ್ವಿ ದಾವನಮನೆ, ಮಹಿಳಾ ಮಂಡಳಿ ಅಧ್ಯಕ್ಷೆ ಅನಿತಾ ನಾಗರಾಜ ಶೇಟ್, ಕಾರ್ಯದರ್ಶಿ ಸ್ವಾತಿ ಮಡಿವಾಳ, ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.










