ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕರ್ನಾಟಕ ಸ್ವಿಮ್ಮಿಂಗ್ ಅಸೋಶಿಯೇಶನ್ (ರಿ) ಬೆಂಗಳೂರು ವಿಜಯನಗರದ ಸ್ವಿಮ್ಮಿಂಗ್ ಪೂಲ್ ನಲ್ಲಿ ನಡೆಸಿದ 22ನೆಯ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಸಾಲಿಗ್ರಾಮ ನಿವಾಸಿ ಶ್ರೀಧರ್ ಉಳಿತಾಯ ಅವರು 400 ಮೀಟರ್ ಫ್ರೀಸ್ಟೈಲ್ ನಲ್ಲಿ ಚಿನ್ನದ ಪದಕ, 100 ಮೀಟರ್ ಬಟರ್ ಫ್ಲೈ ನಲ್ಲಿ ಚಿನ್ನದ ಪದಕ, 50 ಮೀಟರ್ ಬಟರ್ ಫ್ಲೈ ನಲ್ಲಿ ಚಿನ್ನದ ಪದಕ, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಕಂಚಿನ ಪದಕ,50×4 ರಿಲೇಯಲ್ಲಿ ಬೆಳ್ಳಿಯ ಪದಕಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರೆ,
ಅವರು ಪ್ರಸ್ತುತ ಬಾರಕೂರು ನ್ಯಾಶನಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಕೃತ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಸಾಲಿಗ್ರಾಮ ಸ್ವಿಮ್ಮಿಂಗ್ ಕ್ಲಬ್‌ನ ಸದಸ್ಯರಾಗಿದ್ದಾರೆ.