ಆಳ್ವಾಸ್: ವಿಮೆನ್ ವೆಲ್‌ಫೇರ್ ಕಮಿಟಿಯಿಂದ ಅತಿಥಿ ಉಪನ್ಯಾಸ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ:
ಭಾವನಾತ್ಮಕ ಗಾಯಗಳು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸಂತ ಆಗ್ನೇಸ್ ಕಾಲೇಜಿನ ಸ್ನಾತಕೋತ್ತರ ಮನಃಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ದೀಪಾ ಕೊಠಾರಿ ಹೇಳಿದರು.

Call us

Click Here

ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿಮೆನ್ ವೆಲ್ ಫೇರ್ ಕಮಿಟಿ ವತಿಯಿಂದ ಆಯೋಜಿಸಿದ್ದ ಅತಿಥಿ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಭಯ, ನಿರಾಕರಣೆ ಹಾಗೂ ಸೋಲಿನಿಂದ ಉಂಟಾಗುವ ಭಾವನಾತ್ಮಕ ಬದಲಾವಣೆಗಳು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ನಮ್ಮಲ್ಲಿರುವ ಭಾವನೆಗಳನ್ನು ಒಪ್ಪಿಕೊಂಡು ಅದರೊಂದಿಗೆ ಬದುಕುವ ಮನೋಸ್ಥೈರ್ಯ ಬೆಳೆಸಿಕೊಳ್ಳಬೇಕು. ವದಂತಿಗಳಿಂದ ದೂರವಿದ್ದು, ವೈಫಲ್ಯದ ಕಾರಣಗಳನ್ನು ಮರು ವ್ಯಾಖ್ಯಾನಿಸಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಸದಾಕತ್ ವಹಿಸಿದ್ದರು, ಕಾಮರ್ಸ್ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ., ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಿಂಚನ ಸ್ವಾಗತಿಸಿದರು, ಸುರಭಿ ವಂದಿಸಿದರು, ರೋಶ್ನಿ ಅತಿಥಿಯನ್ನು ಪರಿಚಯಿಸಿದರು. ಮೀಶ ಕಾರ್ಯಕ್ರಮ ನಿರೂಪಿಸಿದರು.

Leave a Reply