ಕುಂದಾಪುರ: ರಾಮಕ್ಷತ್ರೀಯ ಸಮಾಜದಲ್ಲಿ ಕುಂದಾಪುರದವರು ಮಾದರಿಯಾಗಿ ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ಭಾರಿ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಯುವಕ ಮಂಡಳಿಯು ಸಮಾಜದ ಅಭಿವೃದ್ಧಿಗಾಗಿ ಮತ್ತಷ್ಟು ಶ್ರಮಿಸಲಿ ಎಂದು ಉದ್ಯಮಿ ದತ್ತಾನಂದ ಜಿ. ಹೇಳಿದರು.
ಅವರು ಕುಂದಾಪುರ ರಾಮಕ್ಷತ್ರಿಯ ಯವಕ ಮಂಡಳಿಯ ಶ್ರೀ ಗಣೇಶೋತ್ಸವದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಮಕ್ಷತ್ರಿಯ ಯುವಕ ಮಂಡಳಿಯ ಸ್ಥಾಪಕಾಧ್ಯಕ್ಷ ಡಿ. ಕೆ. ರತ್ನಾಕರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಯುವಕ ಮಂಡಳಿಗೆ ಸ್ಮರಣೀಯ ಸೇವೆ ಸಲ್ಲಿಸಿದ ಚಂದ್ರಶೇಖರ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ರವೀಂದ್ರ ಶೇರುಗಾರ್, ಕೊಲ್ಲೂರು ಮೂಕಾಂಬಿಕಾ ದೇವಳದ ಧರ್ಮದರ್ಶಿ ಜಯಾನಂದ ಹೋಬಳಿದಾರ್ ಉಪಸ್ಥಿತರಿದ್ದರು. ಕುಂದಾಪುರ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಸುರೇಶ್ ಬೆಟ್ಟಿನ್, ಸುವರ್ಣ ಸಂಭ್ರಮ ಸಮಿತಿಯ ಗೌರವಾಧ್ಯಕ್ಷ ಅಜೀತ್ ಕುಮಾರ್ ಬಾಣ, ಯುವಕ ಮಂಡಳಿಯ ಪೂವಾಧ್ಯಕ್ಷರುಗಳು ವೇದಿಕೆಯಲ್ಲಿದ್ದರು.
ರಾಮಕ್ಷತ್ರಿಯ ಯುವಕ ಮಂಡಳಿ ಸುವರ್ಣ ಸಂಭ್ರಮ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ಯು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ರಾಜಶೇಖರ ಹೆಗ್ಡೆ ಧನ್ಯವಾದಗೈದರು. ರತ್ನಾಕರ ಮಕ್ಕಿಮನೆ ಕಾರ್ಯಕ್ರಮ ನಿರೂಪಿಸಿದರು.



























