ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಮತ್ತು ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಆಸುಪಾಸಿನ ಆಯ್ದ ಪ್ರೌಢಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಸವಿ ಪ್ರತಿಭಾ ಶೋಧ ಎನ್ನುವ ಶೈಕ್ಷಣಿಕ ಸ್ಪರ್ಧೆಯನ್ನು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಆಯೋಸಲಾಯಿತು.
ಗಂಗೊಳ್ಳಿಯ ಜಿ.ಎಸ್. ವಿ.ಎಸ್ ಅಸೋಸಿಯೇಷನ್ ರಿ. ಕಾರ್ಯದರ್ಶಿ ಎಚ್ ಗಣೇಶ್ ಕಾಮತ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಭಿನ್ನ ರೀತಿಯ ಪ್ರತಿಭೆಗಳು ಅಡಗಿರುತ್ತದೆ ಅದನ್ನು ಶೋಧಿಸಲು ಇಂತಹ ಶೈಕ್ಷಣಿಕ ಸ್ಪರ್ಧೆಗಳು ಅನುಕೂಲ ಮಾಡಿಕೊಡುತ್ತವೆ. ಶೈಕ್ಷಣಿಕ ಸಂಸ್ಥೆಗಳ ನಡುವೆ ಸಹಕಾರಯುತ ಸೌಹಾರ್ದ ಮನೋಭಾವನೆಯನ್ನು ಬೆಳೆಸಲು ಕೂಡ ನೆರವಾಗುತ್ತವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ವಹಿಸಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ನಾಗರಾಜ ಶೆಟ್ಟಿ ಸ್ವಾಗತಿಸಿದರು.ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್. ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿನಿ ಶ್ರೇಯ ಎನ್ ಖಾರ್ವಿ ಪ್ರಾರ್ಥಿಸಿದರು. ರಕ್ಷಿತಾ ಆರ್ ಪೂಜಾರಿ ಕಾರ್ಯಕ್ರಮ ನಿರೂಪಣೆ ಮಾಡಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ವಂದಿಸಿದರು.