ಕನ್ನಡವೆಂದರೆ ಬರಿ ನುಡಿಯಲ್ಲ ಅದು ಜೀವನದ ಅರ್ಥ: ತಹಶೀಲ್ದಾರ್ ಶೋಭಾಲಕ್ಷ್ಮೀ ಹೆಚ್. ಎಸ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಕನ್ನಡ ಭಾಷೆಯ ನೆಲೆಗಟ್ಟಿನಲ್ಲಿ ಏಕೀಕರಣಗೊಂಡ ಕನ್ನಡ ನಾಡು ಅತ್ಯಂತ ವಿಶಿಷ್ಟವಾದ ಸಂಸ್ಕೃತಿ ಕಲೆ ಮತ್ತು ಪರಂಪರೆಗೆ ನೆಲೆಯಾಗಿದೆ ಎಂದು ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಹೆಚ್. ಎಸ್ ಹೇಳಿದರು.

Call us

Click Here

ಅವರು ತಾಲೂಕಿನ ಆಡಳಿತ ಕಛೇರಿ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವ ಸೋಮವಾರ ಬೈಂದೂರು ಗಾಂಧಿ ಮೈದಾನದಲ್ಲಿ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿ ಕನ್ನಡವೆಂದರೆ ಬರಿ ನುಡಿಯಲ್ಲ ಅದು ಜೀವನದ ಅರ್ಥ ಎಂಬ ಕವಿವಾಣಿಯಂತೆ ಇಲ್ಲಿನ ಭಾಷೆ, ಪರಂಪರೆ, ಕಲೆ ಮತ್ತು ಸಾಹಿತ್ಯ ಸಂಸ್ಕೃತಿಗಳೆಲ್ಲವೂ ಕನ್ನಡಮಯವೇ. ಇಲ್ಲಿ ಆಳಿದ ನೂರಾರು ರಾಜಮನೆತನಗಳು, ಕನ್ನಡ ನಾಡಿನ ಶಿಲ್ಪ, ಸಂಗೀತ, ನೃತ್ಯ, ನಾಟಕ, ಸಾಹಿತ್ಯ ಪರಂಪರೆಗಳನ್ನು ಪೋಷಿಸಿವೆ. ನಾಡಿನ ಪ್ರತಿಯೊಬ್ಬ ಪ್ರಜೆಯೂ ಭಾವೈಕತೆ, ನಾಡಪ್ರೇಮ ಮತ್ತು ದೇಶಪ್ರೇಮವನ್ನು ಹೊಂದಿ ಈ ನಾಡಿನ ಸಮಗ್ರ ಅಭಿವೃದ್ಧಿಗೆ ತಮ್ಮ ಸಮಯವನ್ನು ಮೀಸಲಿಡಲು ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯರಾದ ಬಾಬು ಹೆಗ್ಡೆ, ಸುರೇಶ್ ಬಟವಾಡಿ, ಬೈಂದೂರು ಪೊಲೀಸ್ ವೃತ್ತನಿರೀಕ್ಷ ಸಂತೋಷ್ ಕಾಯ್ಕಿಣಿ, ಬೈಂದೂರು ಠಾಣಾ ಪಿಎಸೈ ಅನಿಲ್, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮುಂದಿನಮನಿ, ಉಪತಹಶೀಲ್ದಾರ್ ಭೀಮಪ್ಪ, ಬೈಂದೂರು ಬಿಜೆಪಿ ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ಗ್ರಾಮ ಲೆಕ್ಕಾಧಿಕಾರಿ ಮಂಜು ಬಿಲ್ಲವ ಯಡ್ತರೆ, ಸತೀಶ್ ಹೋಬಳಿದಾರ್ ಪಡುವರಿ, ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಉಪಪ್ರಾಂಶುಪಾಲ ಪದ್ಮನಾಭ ಬೈಂದೂರು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಭಾಗೀರಥಿ ಸುರೇಶ್, ಬೈಂದೂರು ತಹಶೀಲ್ದಾರ್ ಕಛೇರಿಯ ಸಿಬ್ಬಂದಿಗಳು, ಪಟ್ಟಣ ಪಂಚಾಯತ್ ಸಿಬ್ಬಂದಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದರು.

ಬೈಂದೂರು ಸ.ಮಾ.ಹಿ.ಪ್ರಾ ಶಾಲೆಯ ಮುಖ್ಯೋಪಾಧ್ಯಾಯ ಜನಾರ್ದನ ದೇವಾಡಿಗ ಸ್ವಾಗತಿಸಿದರು. ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಎಸ್ ಧ್ವಜಾರೋಹಣ ಕಾರ್ಯಕ್ರಮ ಅಚ್ಚುಕಟ್ಟಾಗಿ ಸಂಘಟಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು. ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ನವೀನ್ ವಂದಿಸಿದರು.

ಕನ್ನಡ ರಾಜ್ಯೋತ್ಸವದ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಬೈಂದೂರು ತಾಲೂಕು ಆಡಳಿತದ ವತಿಯಿಂದ ಸಿಹಿ ತಿಂಡಿಗಳನ್ನು ಹಂಚಲಾಯಿತು.

Click here

Click here

Click here

Click Here

Call us

Call us

Leave a Reply