ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಾಥಮಿಕ ಆರೋಗ್ಯ ಕೇಂದ್ರ ವಂಡ್ಸೆ, ರೋಟರಿ ಕ್ಲಬ್ ಕುಂದಾಪುರ, ಗ್ರಾಮ ಪಂಚಾಯಿತಿ ವಂಡ್ಸೆ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೆಬಲ್ ಟ್ರಸ್ಟ್, ಶಿರೂರು ಮುದ್ದುಮನೆ ಇವರ ಆಶ್ರಯದಲ್ಲಿ ಕಣ್ಣಿನ ಪೊರೆ ರೋಗ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದದಲ್ಲಿ ನಡೆಯಿತು.
ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಶಶಿಧರ ಹೆಗ್ಡೆ ಶಿಬಿರವನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯತ್ ಕಾರ್ಯದರ್ಶಿ ಶಂಕರ ಆಚಾರ್ಯ ಮತ್ತು ಸಿಬ್ಬಂದಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ ಶಿರೂರು ಮುದ್ದುಮನೆ ಇದರ ನೇತ್ರ ತಜ್ಞರಾದ ಡಾ. ಮನೋಜ್ ಭಟ್ ಮತ್ತು ಡಾ. ಅಭಿನಯ ಹಾಗೂ ತಂಡ, ರೋಟರಿ ಕ್ಲಬ್ ಕುಂದಾಪುರದ ಸದಸ್ಯರಾದ ರವಿರಾಜ್ ಶೆಟ್ಟಿ ಮತ್ತು ಗಣೇಶ್ ಐತಾಳ್ ಉಪಸ್ಥಿತರಿದ್ದರು.
ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಪ್ರವೀಣ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ ಶಿರೂರು ಮುದ್ದುಮನೆ ಇದರ ಪ್ರತಿನಿಧಿ ಶಂಕರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೋಟರಿ ಕ್ಲಬ್ ಕುಂದಾಪುರದ ಕಾರ್ಯದರ್ಶಿ ಕುಮಾರ್ ಎಸ್. ಕಾಂಚನ್ ವಂದಿಸಿದರು. 104 ಜನ ಶಿಬಿರಾರ್ಥಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು.