ಕುಂದಾಪುರದಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ಆಚರಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ರಾಜು ಕೆ. ಅವರು, ವಚನ, ಗಾಯನದಂತೆ ಯಕ್ಷಗಾನವು ಕನ್ನಡ ನುಡಿ ಸೇವೆಗೆ ಮಹತ್ತರ ಕೊಡುಗೆ ನೀಡಿದೆ. ವಿಜ್ಞಾನ, ವೈದ್ಯಕೀಯ, ತಂತ್ರಜ್ಞಾನ ಭಾಷೆಯೂ ಕನ್ನಡವಾಗಬೇಕು ಎನ್ನುವ ಆಶಯ ನಮ್ಮದು. ಕನ್ನಡಕ್ಕೆ ಎರಡೂವರೆ ಸಾವಿರ ವರ್ಷಗಳ ಭವ್ಯವಾದ ಇತಿಹಾಸವಿದೆ. ಕನ್ನಡದ ಶ್ರೇಷ್ಠತೆಯನ್ನು ಮುಂದುವರಿಸಿಕೊಂಡು ಹೋಗಬೇಕಾದ ಜವಬ್ದಾರಿ ನಮ್ಮ ಮೇಲಿದೆ ಎಂದರು.

Call us

Click Here

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಪುರಸಭಾಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್ ಮಾತನಾಡಿ, ಕನ್ನಡದ ಕಂಪು ದಶ ದಿಕ್ಕುಗಳಿಗೂ ವ್ಯಾಪಿಸಿದೆ. ಕನ್ನಡದ ಶಕ್ತಿ ಅದ್ಭುತ. ಕನ್ನಡ ಭಾಷೆಯ ಬಳಕೆ ಎಲ್ಲ ಕಡೆಗಳಲ್ಲೂ ನಿರಂತರವಾಗಿರಬೇಕು ಎಂದರು.

ಪುರಸಭಾ ಉಪಾಧ್ಯಕ್ಷ ಸಂದೀಪ್ ಖಾರ್ವಿ, ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಸದಸ್ಯರಾದ ದೇವಕಿ ಸಣ್ಣಯ್ಯ, ಪ್ರಭಾಕರ್ ವಿ., ಸಂತೊಷ್ ಶೆಟ್ಟಿ, ಕಮಲ ಮಂಜುನಾಥ್ ಪೂಜಾರಿ, ಪುಷ್ಪಾ ಶೇಟ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ ಎಸ್. ಪೂಜಾರಿ, ಪುರಸಭಾ ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಕೆ. ಪದ್ಮನಾಭ ಮೊದಲಾದವರು ಉಪಸ್ಥಿತರಿದ್ದರು.

ಕುಂದಾಪುರ ಪೊಲೀಸ್ ಠಾಣಾಧಿಕಾರಿ ಸದಾಶಿವ ಗವರೋಜಿ ನೇತೃತ್ವದಲ್ಲಿ ಪೊಲೀಸ್ ಇಲಾಖೆಯಿಂದ ಧ್ವಜವಂದನೆ ನಡೆಯಿತು. ಶಿಕ್ಷಕ ಪ್ರಕಾಶ್ ನೇತೃತ್ವದಲ್ಲಿ ಕನ್ನಡ ಗೀತೆಗಳ ಗಾಯನ ನಡೆಯಿತು. ಕುಂದಾಪುರ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಸ್ವಾಗತಿಸಿ, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಕುಸುಮಾಕರ್ ಶೆಟ್ಟಿ ವಂದಿಸಿದರು. ಶಿಕ್ಷಕ ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply