ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದರೆ: ಕರ್ನಾಟಕ ರಾಜ್ಯ ವೇಟ್‌ಲಿಫ್ಟಿಂಗ್ ಅಸೋಸಿಯೇ?ನ್ ಮತ್ತು ದಾವಣಗೆರೆ ಜಿಲ್ಲಾ ವೇಟ್ ಲಿಫ್ಟಿಂಗ್ ಅಸೋಸಿಯೇ?ನ್ ಆಶ್ರಯದಲ್ಲಿ ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜು ಮೂಡುಬಿದ್ರೆ ಸಮಗ್ರ ತಂಡ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
ಬಾಲಕ ಮತ್ತು ಬಾಲಕಿಯರ ತಂಡ ಪ್ರಶಸ್ತಿಯಲ್ಲಿ ಪ್ರಥಮ, ಜೂನಿಯರ್ ಬಾಲಕರ ವಿಭಾಗದಲ್ಲಿ ಪ್ರಥಮ, ಬಾಲಕಿಯರ ವಿಭಾಗದಲ್ಲಿ ದ್ವಿತೀಯ, ಮಹಿಳಾ ವಿಭಾಗದಲ್ಲಿ ಪ್ರಥಮ ಹಾಗೂ ಪುರು?ರ ವಿಭಾಗದಲ್ಲಿ ದ್ವಿತೀಯ ತಂಡ ಪ್ರಶಸ್ತಿ ಪಡೆಯುವ ಮೂಲಕ ಸಮಗ್ರ ತಂಡ ಪ್ರಶಸ್ತಿ ಪಡೆದಿಕೊಂಡಿದೆ. ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಶ್ಲಾಘಿಸಿದ್ದಾರೆ.