ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆಯು ಕನ್ನಡ ರಾಜ್ಯೋತ್ಸವ ವನ್ನು ಇಲ್ಲಿನ ಚೈತನ್ಯ ವೃದ್ದಾಶ್ರಮದ ಹಿರಿಯರೊಂದಿಗೆ ವಿಶಿಷ್ಟವಾಗಿ ಆಚರಿಸಲಾಯಿತು.
ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಟ್ರಸ್ಟಿ ಶಾಂತಾ ಅವರು, ತಮ್ಮ ಸಹೋದರಿಯ ಜನುಮದಿನದ ಪ್ರಯುಕ್ತ ವೃದ್ದಾಶ್ರಮದಲ್ಲಿ ವಿಶೇಷ ಸಿಹಿ ಊಟದ ವ್ಯವಸ್ಥೆ ಮಾಡಿದರು.
ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆಯ ಎಲ್ಲಾ ಸೇವಾ ಯೋಜನೆಗಳಿಗೆ ಆರ್ಥಿಕ ಸಹಕಾರ ನೀಡುತ್ತಾ ಬಂದಿರುವ ಶಾಂತಾ ಅವರನ್ನು ಸಂಸ್ಥೆಯ ವತಿಯಿಂದ ಗೌರವಪೂರ್ಣವಾಗಿ ಸನ್ಮಾನಿಸಲಾಯಿತು. ಹಾಗೂ ಅಶಕ್ತರಿಗೆ ಮನೆ ನಿರ್ಮಾಣದ ಸಲುವಾಗಿ ಆಯೋಜಿಸಿರುವ ಮುಂದಿನ ಕ್ರಿಕೆಟ್ ಪಂದ್ಯಕ್ಕೆ ಆಮಂತ್ರಿಸಲಾಯಿತು.
ಈ ಸಂದರ್ಭ ಹೆಲ್ಪಿಂಗ್ ಹ್ಯಾಂಡ್ಸ್‌ನ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.