ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬಿಸಿ ಟ್ರಸ್ಟ್‌ನ ವಂಡ್ಸೆ ಕಾರ್ಯಕ್ಷೇತ್ರ ವ್ಯಾಪ್ತಿಯ ಗ್ರಾಹಕ ಸೇವಾ ಕೇಂದ್ರ ಇತೀಚೆಗೆ ಶುಭಾರಂಭಗೊಂಡಿತು. ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಜಿ. ಶ್ರೀಧರ್ ಶೆಟ್ಟಿ ಸೇವಾ ಕೇಂದ್ರವನ್ನು ಉದ್ಘಾಟಿಸಿದರು.
ಜ್ಞಾನವಿಕಾಸ ಕಾರ್ಯಕ್ರಮದ ಸಮನ್ವಯಾಧಿಕಾರಿ ಗೀತಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವಂಡ್ಸೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗೀತಾ ಅವಿನಾಶ್, ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಗೋವರ್ದನ್ ಜೋಗಿ, ಸುಬ್ಬು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಂಕರ ಆಚಾರ್ಯ, ವೆಂಕಟೇಶ್ ಶೆಟ್ಟಿ, ಪ್ರಭಾಕರ ಶೆಟ್ಟಿ, ವಂಡ್ಸೆ ಒಕ್ಕೂಟದ ಅಧ್ಯಕ್ಷ ಗಿರೀಶ್ ಎನ್ ನಾಯ್ಕ್, ಜಯಂತಿ ಪಿ.ಶೆಟ್ಟಿ, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸೇವಾ ಪ್ರತಿನಿಧಿ ಶರ್ಮಿಳಾ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಪಾರ್ವತಿ ಪ್ರಸ್ತಾವಿಕ ಮಾತುಗಳನ್ನಾಡಿದರು.