ಗಿರಿಜನ ಮಹಿಳಾ ವಿಕಲಚೇತನರಿಗೆ ಮಾಹಿತಿ ಕಾರ್ಯಾಗಾರ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಗಿರಿಜನ ಮಹಿಳಾ ವಿಕಲಚೇತನರ ಸರಕಾರಿ ಯೋಜನೆಗಳ ಜಿಲ್ಲಾ ಮಟ್ಟದ ಮಾಹಿತಿ ಕಾರ್ಯಾಗಾರವು ಇತ್ತೀಚೆಗೆ ಜಿಲ್ಲಾ ಪಂಚಾಯತ್ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆ ಮತ್ತು ವಾಣಿಜ್ಯ ವಿಭಾಗ, ಮಣಿಪಾಲ ಎಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಿತು.

Call us

Click Here

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಉದ್ಘಾಟಿಸಿದರು. ಮಾಹೆಯ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಸಂದೀಪ್ ಎಸ್ ಶೆಣೈ ಅತಿಥಿ ಭಾಷಣವನ್ನು ಮಾಡಿದರು.

ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಸಮನ್ವಯಾಧಿಕಾರಿ ದೂದ್ಪೀರ್ ಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್ ಶೇಷಪ್ಪ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಯತೀಶ್ ತಮ್ಮ ಇಲಾಖೆಗಳಿಗೆ ಸಂಬಂಧಪಟ್ಟ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಮೀನಾಕ್ಷಿ ಸ್ವಾಗತಿಸಿದರು. ಡಾ. ಸತೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ 80 ಕ್ಕೂ ಹೆಚ್ಚು ಗಿರಿಜನ ಮಹಿಳಾ ವಿಕಲಚೇತನ ಫಲಾನುಭವಿಗಳು ಹಾಗೂ ಅವರ ಪೋಷಕರು ಪಾಲ್ಗೊಂಡಿದ್ದರು.

Leave a Reply