Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟೇಶ್ವರ ಕೊಡಿ ಹಬ್ಬ: ಸಂಭ್ರಮದಿ ಜರುಗಿದ ವಾರ್ಷಿಕ ಮನ್ಮಹಾರಥೋತ್ಸವ
    Uncategorized

    ಕೋಟೇಶ್ವರ ಕೊಡಿ ಹಬ್ಬ: ಸಂಭ್ರಮದಿ ಜರುಗಿದ ವಾರ್ಷಿಕ ಮನ್ಮಹಾರಥೋತ್ಸವ

    Updated:19/11/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟೇಶ್ವರ:
    ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಶುಕ್ರವಾರ ಸಡಗರ ಸಂಭ್ರಮದಿಂದ ಜರುಗಿತು. ಬೆಳಗ್ಗೆ ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳು ಆರಂಭಗೊಂಡವು. ತಂತ್ರಿಗಳು ಧಾರ್ಮಿಕ ವಿಧಿ ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

    Click Here

    Call us

    Click Here

    ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಸಂಜೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಳ್ಳುತ್ತದೆ. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು. ಕೋವಿಡ್ ಮಾರ್ಗಸೂಚಿ ಇದ್ದ ಹಿನ್ನೆಲೆಯಲ್ಲಿ ಸರಳ ಆಚರಣೆ ನಡೆಯಿತು.

    ದೇವಳದ ರಥೋತ್ಸವದ ಸಂದರ್ಭ ಗರುಡ ದರ್ಶನ ಆಗುವುದು ವಾಡಿಕೆ. ಸಂಜೆಯ ರಥೋತ್ಸವಕ್ಕೆ ಚಾಲನೆ ಸಿಗುತ್ತಿರುವಂತೆಯೇ ಗರುಡ ದರ್ಶನ ಆಗಿದ್ದು ರಥಕ್ಕೆ ಎರಡು ಸುತ್ತು ಬಂದು ನಿರ್ಗಮಿಸುತ್ತದೆ. ಗರುಡದರ್ಶನ ವೀಕ್ಷಿಸಲು ಸಹಸ್ರಾರು ಭಕ್ತರು ನೆರೆದಿದ್ದು ಗರುಡ ರಥಕ್ಕೆ ಸುತ್ತು ಹೊಡೆಯುತ್ತಿರುವಂತೆಯೇ ರೋಮಾಂಚನಗೊಂಡರು.

    ನವ ವಧುವರರು ವಾಡಿಕೆಯಂತೆ ಹಬ್ಬಕ್ಕೆ ಬಂದು ಕೊಡಿ(ಕಬ್ಬು) ಕೊಂಡು ದೇವರಿಗೆ ಪೂಜೆ ಸಲ್ಲಿಸಿದರು. ಕೊಡಿಹಬ್ಬದ ಅಂಗವಾಗಿ ನಗರದ ಬೀದಿಗಳು ಸಿಂಗಾರಗೊಂಡಿದ್ದು ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅವರ ನೇತೃತ್ವದಲ್ಲಿ ದೇವಳಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಹಬ್ಬದ ಸಲುವಾಗಿ ಕುಂದಾಪುರ ಡಿ.ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋವಸ್ತ್ ಮಾಡಲಾಗಿತ್ತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    06/07/2026

    ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    25/06/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

    25/06/2026
    Leave A Reply Cancel Reply

    eleven − eight =

    Call us

    Click Here

    Call us

    Call us

    Call us
    Highest Viewed Recently
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.