ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಎಲ್ಲಾ ನಾಯಕರ ಸಂಘಟಿತ ಹೋರಾಟದಿಂದ ಕಾಂಗ್ರೆಸ್ ಪಕ್ಷ ಮತ್ತೆ ಯಶಸ್ಸು ಕಾಣಲು ಸಾಧ್ಯವಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಅವರು ಸೋಮವಾರ ಇಲ್ಲಿನ ವೈಷ್ಣವಿ ಕಾಂಪ್ಲೆಕ್ಸ್‌ನಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿ ಉದ್ಘಾಟಿಸಿ ಶುಭಹಾರೈಸಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೊಂದಣಿ ಆರಂಭಿಸಲಾಗಿದ್ದು ಪ್ರತಿ ಕ್ಷೇತ್ರದಲ್ಲಿ ಏಳು ಸಾವಿರ ಸದಸ್ಯರುನ್ನು ನೊಂದಾಯಿಸುವ ಗುರಿ ಹೊಂದಲಾಗಿದೆ ಎಂದರು.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಮಾತನಾಡಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೇರಲು ಎಲ್ಲಾ ಕಾರ್ಯಕರ್ತರ ಬೆಂಬಲ ಬಹುಮುಖ್ಯ. ನೂತನ ಕಛೇರಿ ಆರಂಭದ ಜೊತೆಗೆ ಮುಂಬರುವ ಚುನಾವಣೆಗೆ ಒಗ್ಗಟ್ಟಾಗಿ ಹೋರಾಡಿ ಗೆಲ್ಲುವ ಬಗ್ಗೆ ಕಾರ್ಯಕರ್ತರು ಶ್ರಮವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಕೆಪಿಸಿಸಿ ಸದಸ್ಯರುಳಾದ ರಘುರಾಮ ಶೆಟ್ಟಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪಕುಮಾರ್ ಶೆಟ್ಟಿ, ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಗೌರಿ ದೇವಾಡಿಗ, ವಂಡ್ಸೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ದೇವಾಡಿಗ, ಕಾಂಗ್ರೆಸ್ ಮುಖಂಡರುಗಳಾದ ವಾಸುದೇವ ಯಡಿಯಾಳ್, ರಮೇಶ್ ಗಾಣಿಗ ಕೊಲ್ಲೂರು, ಮೋಹನ ಪೂಜಾರಿ ಉಪ್ಪುಂದ, ಉದಯಕುಮಾರ್ ಶೆಟ್ಟಿ ವಂಡ್ಸೆ, ವಿಜಯ ಶೆಟ್ಟಿ ಕಾಲ್ತೋಡು, ಪ್ರಸನ್ನಕುಮಾರ್ ಶೆಟ್ಟಿ ಕೆರಾಡಿ, ಜಗದೀಶ ದೇವಾಡಿಗ, ನಗರ ಕಾಂಗ್ರೆಸ್ ಅಧ್ಯಕ್ಷ ನಾಗರಾಜ ಗಾಣಿಗ, ಯುವ ಕಾಂಗ್ರೆಸ್ ಅಧ್ಯಕ್ಷಶೇಖರ ಪೂಜಾರಿ ಉಪ್ಪುಂದ, ಅರವಿಂದ ಪೂಜಾರಿ ನಾಡ, ಮಣಿಕಂಠ ದೇವಾಡಿಗ, ಮಂಜುನಾಥ ಪೂಜಾರಿ, ಸುಬ್ರಹ್ಮಣ್ಯ ಪೂಜಾರಿ ಮೊದಲಾದವರು ಉಪಸ್ಥಿತಿತರಿದ್ದರು.