Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕನಕದಾಸರ ಚಿಂತನೆಗಳು ಸಾರ್ವಕಾಲಿಕ ಸತ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
    ಉಡುಪಿ ಜಿಲ್ಲೆ

    ಕನಕದಾಸರ ಚಿಂತನೆಗಳು ಸಾರ್ವಕಾಲಿಕ ಸತ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಮನುಷ್ಯರಲ್ಲಿ ಜಾತಿ, ಮತ, ಭೇದ ತೊರೆದು ಸಮಾನತೆ ಸಾರುವ ಕನಕದಾಸರ ಚಿಂತನೆ ಮತ್ತು ತತ್ವಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದ್ದು,ಸಾರ್ವಕಾಲಿಕ ಸತ್ಯ ಆಗಿವೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು.

    Click Here

    Call us

    Click Here

    ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ನಡೆದ ಶ್ರೀ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ, ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

    ಅಂದಿನ ಕಾಲದಲ್ಲಿದ್ದ ಜಾತಿ ಭೇದ ಭಾವಗಳ ಕುರಿತು ಕನಸದಾಸರು ತಮ್ಮ ಕೀರ್ತನೆಗಳಲ್ಲಿ ತಿಳಿಸಿದ್ದು, ಇಂದಿಗೂ ಸಮುದಾಯಗಳಲ್ಲಿ ಈ ಅಸಮಾನತೆ ಕಂಡು ಬರುತ್ತಿದ್ದು, ಕನಕದಾಸರ ಚಿಂತನೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಸಮಾಜದಲ್ಲಿ ಅಸಮಾನತೆ ತೊಡೆಯಲು ಸಾಧ್ಯವಿದೆ. ಯಾವುದೇ ವ್ಯಕ್ತಿ ಅಹಂಕಾರದಿAದ ಶ್ರೇಷ್ಠನಾಗಲು ಸಾಧ್ಯವಿಲ್ಲ ಎಂಬುದನ್ನು ತಮ್ಮ ರಾಮ ಧಾನ್ಯ ಚರಿತ್ರೆ ಕೃತಿಯ ಮೂಲಕ ಮಾನವಕುಲಕ್ಕೆ ತಿಳಿಸಿದ್ದಾರೆ ಎಂದ ಜಿಲ್ಲಾಧಿಕಾರಿ ಕೂರ್ಮಾರಾವ್, ಉಡುಪಿಗೂ ಕನಕದಾಸರಿಗೂ ಅವಿನಾಭಾವ ಸಂಬಧವಿದೆ ಎಂದರು.

    ಕನಕದಾಸರ ಜೀವನ ಮತ್ತು ವ್ಯಕ್ತಿತ್ವದ ಕುರಿತು ಉಪನ್ಯಾಸ ನೀಡಿದ ಸಾಹಿತಿ ಕಾತ್ಯಾಯನಿ ಕುಂಜಿಬೆಟ್ಟು ಮಾತನಾಡಿ, ಕನಕದಾಸರು ಭಕ್ತಿ ಕವಿ ಮಾತ್ರವಲ್ಲದೇ, ಸಂತ ಕವಿ,ತತ್ವಜ್ಞಾನಿ,ದಾರ್ಶನಿಕರೂ ಆಗಿದ್ದರು. ಮಾನವನಿಗೆ ಆತ್ಮ ಸಾಕ್ಷಾರ ಆಗದೇ ದೈವ ಸಾಕ್ಷಾರ ಆಗಲು ಸಾಧ್ಯವಿಲ್ಲ ಎಂಬುದನ್ನು ತಿಳಿಸಿದ್ದ ಅವರು, ಮನಸ್ಸಿನ ದಾಸರಾಗದೇ,ಮಾಯೆಯನ್ನು ದಾಟಿದವರಾಗಿದ್ದರು. ಸಮಾಜದಲ್ಲಿ ಮನುಷ್ಯರ ನಡುವಿನ ಜಾತಿ ಮತ ತಾರತಮ್ಮವನ್ನು ಎಲ್ಲರ ಮನಸ್ಸಿನಿಂದ ತೊಳೆಯುವ ಕಾರ್ಯ ಮಾಡಿದ್ದರು, ಮಾನವೀಯತೆಯೇ ಭಕ್ತಿ ಎಂಬುದನ್ನು ಸಾರಿದ್ದ ಅವರ ಎಲ್ಲಾ ಚಿಂತನೆಗಳು , ಐಷಾರಾಮಿ ಜೀವನದ ಈ ಕಾಲಘಟ್ದದಲ್ಲಿ ಅತ್ಯಂತ ಪ್ರಸ್ತುತವಾಗಿವೆ ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಜಿಲ್ಲಾ ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಕರ್ನಾಟಕ ಪ್ರದೇಶ ಕುರುಬರ ಸಂಘ ಉಡುಪಿ ಜಿಲ್ಲೆಯ ನಿರ್ದೇಶಕ ಬಸವರಾಜ ಕುರುಬರ, ಮುಖಂಡರಾದ ಹನುಮಂತ ಆಡಿನ, ಹನುಮಂತ ಗೋಹಿ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026
    Leave A Reply Cancel Reply

    1 × 1 =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.