ಗಂಗೊಳ್ಳಿ: ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಬಾಲ್ಯದಲ್ಲಿ ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣ ಅವರ ಮುಂದಿನ ಭವಿಷ್ಯಕ್ಕೆ ಭದ್ರ ಬುನಾದಿ ಒದಗಿಸಲಿದೆ. ಸರಕಾರ ಅಂಗನವಾಡಿ ಮಕ್ಕಳ ಶಿಕ್ಷಣ ಹಾಗೂ ಆರೋಗ್ಯಕ್ಕಾಗಿ ಹೆಚ್ಚಿನ ಅನುದಾನ ಒದಗಿಸುತ್ತಿದೆ. ಗಂಗೊಳ್ಳಿಯ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಸುಮಾರು 60ಕ್ಕೂ ಮಿಕ್ಕಿ ಮಕ್ಕಳು ದಾಖಲಾಗಿರುವುದು ವಿಶೇಷವಾಗಿದ್ದು, ಮಕ್ಕಳ ಕಲಿಕೆಯನ್ನು ಇನ್ನಷ್ಟು ಉತ್ತಮವಾಗಿಸಲು ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಬಿ.ರಾಘವೇಂದ್ರ ಪೈ ಹೇಳಿದರು.

Call us

Click Here

ಗಂಗೊಳ್ಳಿ ಗ್ರಾಮದ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹಾಗೂ ಸಹಾಯಕಿಯರು ಕೊಡ ಮಾಡಿದ ಕಲಿಕಾ ಸಾಮಾಗ್ರಿಗಳನ್ನು ಮಕ್ಕಳಿಗೆ ಮಂಗಳವಾರ ವಿತರಿಸಿ ಅವರು ಮಾತನಾಡಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಬಿ.ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯೆ ಜಯಂತಿ ಖಾರ್ವಿ, ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜೀಟಾ, ಬಾಲವಿಕಾಸ ಸಮಿತಿ ಅಧ್ಯಕ್ಷೆ ನೇತ್ರಾವತಿ ಖಾರ್ವಿ, ಅಂಗನವಾಡಿ ಸಹಾಯಕಿ ಶಾಂತಿ ಖಾರ್ವಿ, ಪೋಷಕರಾದ ಆಶಾ ಡಿಕೋಸ್ಟ, ಅಶೋಕ ಖಾರ್ವಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ರೇಖಾ ಖಾರ್ವಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply