ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ 2021-22ನೇ ಸಾಲಿನ ಯೂತ್‌ರೆಡ್‌ಕ್ರಾಸ್ ಸಂಸ್ಥೆಯ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮವನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರಘಟಕದ ಸಭಾಪತಿಗಳಾದ ಎಸ್.ಜಯಕರ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್ .ಪಿ. ನಾರಾಯಣ ಶೆಟ್ಟಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯೂತ್‌ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸಂಚಾಲಕರಾದ ಸತ್ಯನಾರಾಯಣ ಪುರಾಣಿಕ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಕಾರ್ಯದರ್ಶಿಗಳಾದ ವೈ.ಸೀತಾರಾಮ ಶೆಟ್ಟಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಖಜಾಂಚಿಗಳಾದ ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ಯೂತ್‌ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯಕ್ರಮ ಸಂಯೋಜಕರಾದ ಸತ್ಯನಾರಾಯಣ ಸ್ವಾಗತಿಸಿದರು. ಸಹ ಕಾರ್ಯಕ್ರಮ ಸಮಯೋಜಕರಾದ ವಿದ್ಯಾರಾಣಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಅಂತಿಮ ಬಿ.ಸಿ.ಎ ವಿದ್ಯಾರ್ಥಿನಿ ಸೌಮ್ಯ ಅವರಿಗೆ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ವತಿಯಿಂದ ಶೈಕ್ಷಣಿಕ ಉದ್ದೇಶಕ್ಕಾಗಿ ಆರ್ಥಿಕ ಸಹಾಯವನ್ನು ಮಾಡಲಾಯಿತು.















