Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯ ಅಭಿವೃದ್ದಿಯಲ್ಲಿ ಯುವ ಜನತೆಯ ಪಾತ್ರ ಮಹತ್ವವಾದುದು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
    ಉಡುಪಿ ಜಿಲ್ಲೆ

    ಜಿಲ್ಲೆಯ ಅಭಿವೃದ್ದಿಯಲ್ಲಿ ಯುವ ಜನತೆಯ ಪಾತ್ರ ಮಹತ್ವವಾದುದು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯ ಅಭಿವೃದ್ದಿಗೆ ಯುವಜನತೆ ನೀಡುವ ಸಹಕಾರ ಅತ್ಯಂತ ಮಹತ್ವವಾಗಿದ್ದು, ಜಿಲ್ಲೆಯಲ್ಲಿನ ವಿವಿಧ ಯೋಜನೆಗಳ ಪ್ರಗತಿಗೆ ಯುವಜನತೆ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.

    Click Here

    Call us

    Click Here

    ಅವರು ಉಡುಪಿ ಪುರಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ,ಉಡುಪಿ, ಐಕ್ಯುಎಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ
    ಇವರ ಸಹಕಾರದೊಂದಿಗೆ ನಡೆದ, ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಜಿಲ್ಲೆಯ ಯುವ ಜನತೆ ಇತ್ತೀಚೆಗೆ ನಡೆದ ಫಿಟ್ ಇಂಡಿಯಾ, ಕ್ಲೀನ್ ಇಂಡಿಯಾ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳ ಸಂಪೂರ್ಣ ಯಶಸ್ಸಿಗೆ ಉತ್ತಮ ಸಹಕಾರ ನೀಡಿದ್ದು, ಜಿಲ್ಲಾಡಳಿತ ಕೂಡಾ ಯುವಜನತೆ ನೀಡುವ ಸಲಹೆಗಳನ್ನು ಪರಿಗಣಿಸುತ್ತಿದ್ದು, ಯುವ ಜನತೆಯ ಕೋರಿಕೆ ಮೇರೆಗೆ ಇತ್ತೀಚೆಗೆ ಐ.ಎ.ಎಸ್. ಕೆ.ಎ.ಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಮಾಹಿತಿ ಮತ್ತು ತರಬೇತಿಯನ್ನು ಏರ್ಪಡಿಸಲಾಗಿದೆ. ಸ್ವಚ್ಚತೆ ಕುರಿತಂತೆ ಜಿಲ್ಲೆಯ ಎಲ್ಲಾ ಕಾಲೇಜುಗಳ ಆವರಣ ಗೋಡೆಗಳ ಮೇಲೆ ಉತ್ತಮ ಸಂದೇಶ ಸಾರುವ ಆಕರ್ಷಕ ಚಿತ್ರಣ ಮತ್ತು ಸಂದೇಶಗಳನ್ನು ರಚಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್, ಪ್ರತಿಯೊಂದು ಕ್ಷೇತ್ರದಲ್ಲೂ ಸಹ ಯುವ ಜನತೆ ತಮ್ಮಲ್ಲಿರುವ ಯುವಶಕ್ತಿ ಮತ್ತು ಪ್ರತಿಭೆಯನ್ನು ಸದ್ಬಳಕೆ ಮಾಡಬೇಕು ಎಂದರು.

    ಜಿಲ್ಲೆಯಲ್ಲಿ ಸಂಪೂರ್ಣ 2 ಡೋಸ್ ಕೋವಿಡ್ ಲಸಿಕೆ ನೀಡುವ ಕಾರ್ಯ ಪ್ರಗತಿಯಲ್ಲಿದ್ದು,ಈಗಾಗಲೇ 93% ಪ್ರಥಮ ಡೋಸ್ ಮತ್ತು 68% ಎರಡನೇ ಡೋಸ್ ಸಾಧನೆ ಆಗಿದ್ದು,100% ಎರಡೂ ಡೋಸ್ ಲಸಿಕೆ ಸಾಧನೆ ಆಗುವ ನಿಟ್ಟಿನಲ್ಲಿ ಯುವ ಜನತೆ ಸಹಕಾರ ಅಗತ್ಯವಾಗಿದ್ದು, ಯುವಜನತೆ ತಮ್ಮ ಮನೆಗಳಲ್ಲಿ ಮತ್ತು ಸಮೀಪದ ಮನೆಗಳಲ್ಲಿ ಕೋವಿಡ್ ಲಸಿಕೆ ಪಡೆಯದವರಿಗೆ ಲಸಿಕೆ ಪಡೆಯುವ ಕುರಿತಂತೆ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಪ್ರೇರೆಪಿಸಬೇಕು ಆ ಮೂಲಕ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಮಾತನಾಡಿ, ಯುವ ಜನತೆಯಲ್ಲಿನ ವ್ಯಕ್ತಿತ್ವ ಮತ್ತು ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಇದರಿಂದ ಯುವ ಜನತೆಯ ವ್ಯಕ್ತಿತ್ವ ವಿಕಸನ ಕೂಡಾ ಆಗಲಿದೆ. ದೇಶದಲ್ಲಿ ಯುವ ಸಂಪತ್ತು ಅತ್ಯಧಿಕವಾಗಿದ್ದು ಇದರ ಸದ್ಬಳಕೆ ಆಗಬೇಕು, ಯುವಕರು ಎಲ್ಲಾ ಕಾರ್ಯಕ್ರಮಗಳ ರಾಯಭಾರಿಗಳಾಗಬೇಕು, ಹೆಚ್ಚಿನ ಸಂಖ್ಯೆಯಲ್ಲಿ ಅತ್ಯುತ್ತಮ ನಾಯಕರು ಯುವ ಸಮುದಾಯದಿಂದ ಮೂಡಿಬರಬೇಕು ಎಂದರು.

    Click here

    Click here

    Click here

    Call us

    Call us

    ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ವಾಣಿ ಬಲ್ಲಾಳ್, ಎನ್.ಎಸ್.ಎಸ್. ಸಂಯೋಜನಾಧಿಕಾರಿ ಡಾ.ರಾಜೆಂದ್ರ ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ತ್ರಿವೇಣಿ ನಿರೂಪಿಸಿದರು.

    ಯುವಜನೋತ್ಸವದಲ್ಲಿ,ಜಾನಪದ ನೃತ್ಯ,ಜಾನಪದ ಹಾಡು, ಏಕಪಾತ್ರಾ ಅಭಿನಯ, ಶಾಸ್ತ್ರೀಯ ಸಂಗೀತ,, ಶಾಸ್ತ್ರೀಯ ನೃತ್ಯ, ಶಾಸ್ತ್ರೀಯ ವಾದ್ಯ, ಹಾರ್ಮೋನಿಯಂ, ಗಿಟಾರ್, ಆಶು ಭಾಷಣ ಮುಂತಾದ ಸ್ಪರ್ಧೆಗಳನ್ನು 3 ವಿವಿಧ ವೇದಿಕೆಗಳಲ್ಲಿ ಏರ್ಪಡಿಸಲಾಗಿತ್ತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026
    Leave A Reply Cancel Reply

    nineteen + 12 =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.