ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ಮಣಿಕಂಠ ಎಸ್ . ಅವರು ಆಯ್ಕೆಯಾಗಿದ್ದಾರೆ.
ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರ ಶಿಪಾರಸ್ಸಿನ ಮೇರೆಗೆ ರಾಜ್ಯ ಹಿಂದುಳಿದ ವರ್ಗದ ಅಧ್ಯಕ್ಷರ ಆದೇಶದ ಮೇರೆಗೆ, ರೋಟರಿ ಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಆದೇಶ ಪ್ರತಿ ನೀಡುವುದರ ಮೂಲಕ ಪದಪ್ರಧಾನ ಮಾಡಿದರು.
ಈ ಸಂಧರ್ಭದಲ್ಲಿ ಮಾಜಿ ಸಭಾಪತಿಗಳಾದ ಪ್ರತಾಪಚಂದ್ರ ಶೆಟ್ಟಿ, ವಿಧಾನ ಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.