Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲಸಿಕೆ ಪಡೆದು ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
    ಉಡುಪಿ ಜಿಲ್ಲೆ

    ಲಸಿಕೆ ಪಡೆದು ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಪ್ರಥಮ ಡೋಸ್ ಕೋವಿಡ್ ಲಸಿಕೆ ನೀಡುವಲ್ಲಿ ಶೇ.93ರಷ್ಟು ಸಾಧನೆ ಮಾಡಿದ್ದು, ಬಾಕಿ ಉಳಿದ ಶೇ.7 ರಷ್ಟು ಜನರಿಗೆ ಲಸಿಕೆ ಪಡೆಯುವಂತೆ ಎಲ್ಲಾ ಸಮುದಾಯಗಳ ಮುಖಂಡರು ಮತ್ತು ವೈದ್ಯರು ಮನವೊಲಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

    Click Here

    Call us

    Click Here

    ಅವರು, ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ, ಜಿಲ್ಲೆಯ ವಿವಿಧ ಸಮುದಾಯಗಳ ಮುಖಂಡರು ಮತ್ತು ವೈದ್ಯರೊಂದಿಗೆ ನಡೆದ, ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಎರಡೂ ಡೋಸ್ ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ನಿಂದ ಗರಿಷ್ಠ ಸುರಕ್ಷೆ ದೊರೆಯಲಿದೆ. ಜಿಲ್ಲೆಯಲ್ಲಿ ಪ್ರಥಮ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಮತ್ತು ಈಗಾಗಲೇ ಮೊದಲ ಡೋಸ್ ಪಡೆದು 2 ನೇ ಡೋಸ್ ಪಡೆಯಲು ಅವಧಿ ಮೀರಿದವರು ತಕ್ಷಣವೇ ಲಸಿಕೆಯನ್ನು ಪಡೆಯಬೇಕು. ಲಸಿಕೆ ಪಡೆಯಲು ನಿರಾಸಕ್ತಿ ತೋರುವವರನ್ನು ಸಂಬಂಧಪಟ್ಟ ಸಮುದಾಯಗಳ ಮುಖಂಡರು ಮನವೊಲಿಸಬೇಕು. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂದು ಮನವರಿಕೆ ಮಾಡಿಕೊಡಬೇಕು ಎಂದರು.

    ಜಿಲ್ಲೆಯ ಎಲ್ಲಾ ವೈದ್ಯರು ತಮ್ಮಲ್ಲಿಗೆ ಬರುವ ರೋಗಿಗಳು ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ಪರಿಶೀಲಿಸಬೇಕು. ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ಲಸಿಕೆಯ ಪ್ರಯೋಜನ ಕುರಿತು ಮನವರಿಕೆ ಮಾಡಿಕೊಡಬೇಕು. ರೋಗಿಗಳಿಗೆ ನೀಡುವ ಸಲಹಾ ಚೀಟಿಯಲ್ಲಿ ಲಸಿಕೆ ಪಡೆಯುವ ಕುರಿತಂತೆ ಹಾಗೂ ರೋಗ ಲಕ್ಷಣಗಳಿದ್ದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆಗಳಂನ್ನು ಬರೆದು ಕೊಡಬೇಕು ಎಂದರು.

    ಜಿಲ್ಲೆಯಾದ್ಯಂತ ಲಸಿಕೆ ಅಭಿಯಾನದಡಿಯಲ್ಲಿ, ಆಶಾ ಕಾರ್ಯಕರ್ತೆಯರು ಮತದಾರರ ಪಟ್ಟಿಯೊಂದಿಗೆ ಮನೆ ಮನೆಗೆ ಭೇಟಿ ನೀಡಿ, ಲಸಿಕೆ ಪಡೆಯದೇ ಇರುವವರ ಮಾಹಿತಿ ಸೇರಿದಂತೆ, ಲಸಿಕೆ ಪಡೆಯದೇ ಇರುವ ಕಾರಣ ತಿಳಿದು ಅವರುಗಳ ಮನವೊಲಿಸಿ ಲಸಿಕೆ ನೀಡುತ್ತಿದ್ದಾರೆ ಎಂದರು.

    Click here

    Click here

    Click here

    Call us

    Call us

    ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳು ಗ್ರಾಮೀಣ ಟಾಸ್ಕ್ಪೋರ್ಸ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾರ್ಡ್ ಮಟ್ಟದಲ್ಲಿ ಟಾಸ್ಕ್ಪೋರ್ಸ್ ಸಮಿತಿ ಸಭೆ ಸೇರಿ, ಲಸಿಕೆ ಪಡೆಯದೇ ಇರುವವರ ಮಾಹಿತಿ ಪಡೆದು, ಅವರುಗಳಿಗೆ ತಿಳಿ ಹೇಳಬೇಕು. ಯಾವುದಾದರೂ ಇತರೆ ಕಾಯಿಲೆಗಳು ಹೊಂದಿದ್ದಲ್ಲಿ ವೈದ್ಯರ ಸಲಹೆ ಪಡೆದು ಲಸಿಕೆ ತೆಗೆದುಕೊಳ್ಳುವಂತೆ ತಿಳಿಸಬೇಕು ಎಂದರು.

    ಜಿಲ್ಲೆಗೆ ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಬರುವವರಿಗೆ ಕೂಡಾ ಲಸಿಕೆ ನೀಡಲು ಕ್ರಮ ಕೈಗೊಂಡಿದ್ದು, ಕೋವಿಡ್ ಕುರಿತು ಜಾಗೃತಿ ಮೂಡಿಸಲು ಬಸ್ ಸ್ಟಾಂಡ್, ಕಮರ್ಷಿಯಲ್ ಕಾಂಪ್ಲೆಕ್ಸ್‌ಗಳು ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲೆಡೆ ಮಾಸ್ಕ್ ಡ್ರೈವ್ ಮಾಡಲಾಗುವುದು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕಾರ್ಯ ನಡೆಯಲಿದ್ದು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ಗಳಲ್ಲಿ ಈ ಕಾರ್ಯ ನಡೆಯಲಿದ್ದು, ಸಾರ್ವಜನಿಕರು ಸಭೆ ಸಮಾರಂಭಗಳಲ್ಲಿ ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದರು.

    ಜಿಲ್ಲೆಯಲ್ಲಿನ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರು 2 ಡೋಸ್ ಲಸಿಕೆ ಪಡೆಯುವ ಮೂಲಕ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಪೌರಾಯುಕ್ತ ಉದಯ ಶೆಟ್ಟಿ, ವಿವಿಧ ಸಮುದಾಯಗಳ ಮುಖಂಡರು, ಐಎಂಎ ಮತ್ತು ಆಯುಷ್ ವೈದ್ಯರು ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ

    07/07/2026

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ

    07/07/2026
    Leave A Reply Cancel Reply

    17 − 15 =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.