ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ನಡೆಸುತ್ತಿರುವ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಗಳು ಡಿಸೆಂಬರ್ 4 ರಂದು ಅಜ್ಜರಕಾಡು ಡಾ. ಜಿ.ಶಂಕರ ಸರಕಾರಿ ಮಹಿಳಾ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ, ಡಿಸೆಂಬರ್ 5 ರಂದು ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಡಿಸೆಂಬರ್ 19 ರಂದು ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಸದರಿ ಪರೀಕ್ಷಾ ಕೇಂದ್ರಗಳ ವಿವರ ಹೀಗಿದೆ: ಅಜ್ಜರಕಾಡು ಡಾ. ಜಿ.ಶಂಕರ ಸರಕಾರಿ ಮಹಿಳಾ ಫಸ್ಟ್ ಗ್ರೇಡ್ ಕಾಲೇಜು, ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಮಿಷನ್ ಕಂಪೌAಡ್ ಬಳಿಯ ಕ್ರಿಶ್ಚಿಯನ್ ಪ್ರೌಢಶಾಲೆ, ಕುಂಜಿಬೆಟ್ಟು ಎಂ.ಜಿ.ಎA ಕಾಲೇಜು, ನಗರದ ಸರ್ವೀಸ್ ಬಸ್ ಸ್ಟ್ಯಾಂಡ್ ಬಳಿಯ ಸರಕಾರಿ ಪದವಿ ಪೂರ್ವ ಕಾಲೇಜು, ಕಡಿಯಾಳಿ ಯು. ಕಮಲಾಬಾಯಿ ಪ್ರೌಢಶಾಲೆ ಹಾಗೂ ಬ್ರಹ್ಮಗಿರಿಯ ಸೆಂಟ್ ಸಿಸಿಲಿಸ್ ಪ್ರೌಢಶಾಲೆಯಲ್ಲಿ ಪರೀಕ್ಷೆಗಳು ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.